ADVERTISEMENT

ಮಂಡ್ಯ | ಲಾರಿಗೆ ಬಸ್‌ ಡಿಕ್ಕಿ: 20 ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 16:33 IST
Last Updated 8 ಫೆಬ್ರುವರಿ 2024, 16:33 IST
ಅಪಘಾತ
ಅಪಘಾತ   

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಸಿದ್ದಯ್ಯನಕೊಪ್ಪಲು ಗೇಟ್‌ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಗಾಯಾಳುಗಳು ನಗರದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್‌ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆಯಿತು. ಬಸ್ ಮುಂಭಾಗದಲ್ಲಿದ್ದ ಪ್ರಯಾಣಿಕರು ಗಾಯಗೊಂಡರು.

ಗ್ರಾಮಾಂತರ ಠಾಣೆ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಎಲ್ಲರನ್ನೂ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.