ಪ್ರಜಾವಾಣಿ ವಾರ್ತೆ:
ಕೆ.ಆರ್.ಪೇಟೆ: ‘ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಲ್ಮೀಕಿ ನಿಗಮ ಹಗರಣ ಹಾಗೂ ಮೈಸೂರು ಮುಡಾ ನಿವೇಶನಗಳ ಹಗರಣದ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
ಮೈಸೂರಿನಿಂದ ಶಿವಮೊಗ್ಗಕ್ಕೆ ಹೋಗುವ ಮಾರ್ಗಮಧ್ಯೆ ಕೆ.ಆರ್.ಪೇಟೆಯಲ್ಲಿ ಈ ವಿಷಯ ತಿಳಿಸಿದರು.
‘ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಸ್ವತಃ ಸಚಿವರೇ ಸಿಕ್ಕಿಬಿದ್ದಿದ್ದಾರೆ. ಮೈಸೂರು ಮುಡಾದಲ್ಲಿ ನಡೆದಿರುವುದು ಕಂಡು ಬಂದಿದೆ. ಇವುಗಳ ವಿರುದ್ಧ ಜೆಡಿಎಸ್-ಬಿಜೆಪಿ ಪಕ್ಷಗಳು ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿವೆ. ಮೈತ್ರಿ ಪಕ್ಷಗಳ ಹೋರಾಟ ಸತ್ಯ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಿಲ್ಲುವುದಿಲ್ಲ’ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರಾದ ಕಿಕ್ಕೇರಿ ಪ್ರಭಾಕರ್, ಭಾರತೀಪುರ ಪುಟ್ಟಣ್ಣ, ಚಂದ್ರಮೋಹನ್, ಬಸ್ ಸಂತೋಷ್ ಕುಮಾರ್, ಕೆ.ಬಿ.ನಂದೀಶ್, ದಯಾನಂದ, ಕರೋಟಿ ಅನಿಲ್, ಅರೆಬೊಪ್ಪನಹಳ್ಳಿ ಸುನಿಲ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.