ADVERTISEMENT

ಸಿ.ಪಿ. ಯೋಗೇಶ್ವರ್ ಗೆಲುವು: ಹರಕೆ ತೀರಿಸಿದ ಪತ್ನಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2024, 16:02 IST
Last Updated 24 ನವೆಂಬರ್ 2024, 16:02 IST
<div class="paragraphs"><p>ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪತ್ನಿ ಪತ್ನಿ ಶೀಲಾ ಯೋಗೇಶ್ವರ್ ಅವರು ಮದ್ದೂರು ಪಟ್ಟಣದ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.</p></div>

ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪತ್ನಿ ಪತ್ನಿ ಶೀಲಾ ಯೋಗೇಶ್ವರ್ ಅವರು ಮದ್ದೂರು ಪಟ್ಟಣದ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

   

ಮದ್ದೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ರವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅವರ ಪತ್ನಿ ಶೀಲಾ ಯೋಗೇಶ್ವರ್ ಅವರು ಪಟ್ಟಣದ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ಕಾಣಿಕೆ ತೀರಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿ.ಪಿ. ಯೋಗೇಶ್ವರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ₹1.25 ಕಟ್ಟಿ ಹರಕೆ ಹೊತ್ತು ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದರು. 

ADVERTISEMENT

ಸಿ.ಪಿ.ಯೋಗೇಶ್ವರ್ ಅವರು 2 ಬಾರಿ ಚುನಾವಣೆ ಸೋತಿದ್ದರು, ಈ ಬಾರಿಯ ಚುನಾವಣೆಯಲ್ಲಿ ಚನ್ನಪಟ್ಟಣದ ಮತದಾರರು ಯೋಗೇಶ್ವರ್ ಅವರನ್ನು ಮನೆ ಮಗನಂತೆ ಅಶೀರ್ವಾದ ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ಈ ವೇಳೆ ಮದ್ದೂರು ಶಾಸಕ ಕೆ.ಎಂ. ಉದಯ್ ಅವರ ಪತ್ನಿ ವಿನುತಾ ಉದಯ್, ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ, ಸಹಾಯಕ ಅರ್ಚಕ ಸುರೇಶ್ ಆಚಾರ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.