ADVERTISEMENT

ಆದಿಚುಂಚನಗಿರಿ ವಿವಿಯಲ್ಲಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ಕೆ ಚಾಲನೆ

mnd

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2023, 17:29 IST
Last Updated 1 ಅಕ್ಟೋಬರ್ 2023, 17:29 IST
ನಾಗಮಂಗಲ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಒಳ ಮತ್ತು ಹೊರಾಂಗಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು
ನಾಗಮಂಗಲ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಒಳ ಮತ್ತು ಹೊರಾಂಗಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು   

ನಾಗಮಂಗಲ: ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾನಿಲಯದ ಸಮುದಾಯ ವೈದ್ಯಶಾಸ್ತ್ರ ವಿಭಾಗವು ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಒಳ ಮತ್ತು ಹೊರಾಂಗಣ ಪ್ರದೇಶದಲ್ಲಿ ಸ್ವಚ್ಛತೆ ಮಾಡುವ ಮೂಲಕ ಚಾಲನೆ ನೀಡಿತು.

ಪ್ರಾಂಶುಪಾಲ ಎಂ.ಜಿ.ಶಿವರಾಮು ಮಾತನಾಡಿ, ‘ಭಾರತದಾದ್ಯಂತ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮನಸ್ಸು ಮತ್ತು ದೇಹ ಶುಚಿಯಾಗಿರಲು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಡಬೇಕು’ ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಸ್ವಯಂಸೇವಾ ಘಟಕದ ಸ್ವಯಂಸೇವಕರು, ಆಸ್ಪತ್ರೆ ಮತ್ತು ಕಾಲೇಜಿನ ಸಿಬ್ಬಂದಿ ವರ್ಗ, ವೈದ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.