ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣಸ್ವಾಮಿ ವೈರಮುಡಿ ಉತ್ಸವಕ್ಕೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಕೋವಿಡ್‌ನಿಂದಾಗಿ ಕಳೆದ ಎರಡು ವರ್ಷಗಳಿಂದ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ನಡೆದಿತ್ತು. ಈ ವರ್ಷ ವೈಭವಯುತವಾಗಿ ನಡೆಯುತ್ತಿದ್ದು, ಮೇಲುಕೋಟೆ ಕ್ಷೇತ್ರದಲ್ಲಿ ಭಕ್ತಸಾಗರವೇ ಸೇರಿದೆ. ಮಾರ್ಚ್ 11ರಂದು ಗರುಡ ಧ್ವಜಾರೋಹಣದ ಮೂಲಕ ವಿಧ್ಯುಕ್ತವಾಗಿ ಬ್ರಹ್ಮೋತ್ಸವ ಆರಂಭಗೊಡಿದೆ. ಸೋಮವಾರ ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ಕಿರೀಟ ಧಾರಣೆ ನಡೆಯಲಿದೆ.
ರಾತ್ರಿ 8.45ಕ್ಕೆ ಮುಖ್ಯಮಂತ್ರಿಗಳು ಉತ್ಸವಕ್ಕೆ ಚಾಲನೆ ನೀಡುವರು. ನಂತರ ರಾತ್ರಿಯಿಡೀ ಉತ್ಸವ ನೆರವೇರಲಿದೆ. ಬೆಳಿಗ್ಗೆ 6.30ಕ್ಕೆ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣಗಳ ಪೆಟ್ಟಿಗೆ ತೆರೆಯಲಾಗುತ್ತದೆ. ನಗರದ ಲಕ್ಷ್ಮಿಜನಾರ್ದನ ದೇಗುಲದಲ್ಲಿ ಪ್ರಥಮ ಪೂಜೆ ಬಳಿಕ ಮೇಲುಕೋಟೆಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.