ADVERTISEMENT

ಮಂಡ್ಯ: ಎಚ್‌ಡಿಕೆಗೆ ನಿಂದಿಸಿದ ಮಹಿಳೆ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 13:16 IST
Last Updated 21 ಜೂನ್ 2024, 13:16 IST
<div class="paragraphs"><p>ಎಚ್‌ಡಿಕೆ</p></div>

ಎಚ್‌ಡಿಕೆ

   

ಮಂಡ್ಯ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮಹಿಳೆ ವಿರುದ್ಧ ಜೆಡಿಎಸ್‌ ಮುಖಂಡರು ನಗರದ ಸೈಬರ್‌ ಕ್ರೈಂ ಇನ್‌ಸ್ಪೆಕ್ಟರ್‌ ಮಂಜೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ. 

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಪಮಾನ ಮಾಡಿರುವ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಚ್.ಡಿ.ಕುಮಾರಸ್ವಾಮಿ ಹಾಗೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧವಿರುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಎಳೆದುತಂದು ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವುದರಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ, ನಾಯಕರಿಗೆ ಬಹಳ ನೋವಾಗಿದೆ ಎಂದು ಆರೋಪಿಸಿದರು.

ADVERTISEMENT

ನಗರಸಭೆ ಸದಸ್ಯ ನಾಗೇಶ, ಮನ್‌ಮುಲ್‌ ಉಪಾಧ್ಯಕ್ಷ ಎಂ.ಎಸ್‌.ರಘುನಂದನ್, ಮುಖಂಡರಾದ ವಸಂತ್‌ರಾಜು, ಬೂದನೂರು ಸ್ವಾಮಿ, ಮಾಚಗೌಡನಹಳ್ಳಿ ಮೋಹನ್, ವರದರಾಜು, ರಾಕೇಶ್ ಭಾಗವಹಿಸಿದ್ದರು.

ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಂಡ್ಯ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ₹ 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾ ವಿದ್ಯಾರ್ಥಿಗಳು ಜೂನ್ 30ರೊಳಗೆ ಅರ್ಜಿಯನ್ನು https://sevasindhuservice. karnataka.gov.in ಜಾಲತಾಣದ ಮೂಲಕ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವನಿಧಿ: ಅಭ್ಯರ್ಥಿಗಳಿಗೆ ಮಾಹಿತಿ

ಮಂಡ್ಯ: ‘ಯುವನಿಧಿ’ ಯೋಜನೆಯಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ-2024ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರಿಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಯೋಜನೆಯ ಪ್ರಯೋಜನವನ್ನು ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಜೋಡಣೆ ಮಾಡಿರುವ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs. karnataka.gov.in  ವೆಬ್‌ಸೈಟ್ ವೀಕ್ಷಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ: 08232-295124 ಸಂಪರ್ಕಿಸಬಹುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.