ADVERTISEMENT

ಮಂಡ್ಯ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ನಾಳೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 15:35 IST
Last Updated 17 ಏಪ್ರಿಲ್ 2024, 15:35 IST
<div class="paragraphs"><p> ನಟ ದರ್ಶನ್ </p></div>

ನಟ ದರ್ಶನ್

   

ಮಳವಳ್ಳಿ: ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಪರ ಚಲನಚಿತ್ರ ನಟ ದರ್ಶನ್ ಗುರುವಾರ ತಾಲ್ಲೂಕಿನ ವಿವಿಧೆಡೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಳಿಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್ ಅವರು ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.