ಪಾಂಡವಪುರ: ‘ವಾರದಲ್ಲಿ ಒಂದು ದಿನ ಕಚೇರಿಯಲ್ಲೇ ಇದ್ದು, ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ಶಾಸಕರ ನೂತನ ಕಚೇರಿಯನ್ನು ಉದ್ಫಾಟಿಸಿ ಅವರು ಮಾತನಾಡಿದರು.
‘ಜನರ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಲಾಗುವುದು. ಎಲ್ಲ ಇಲಾಖೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕಿದೆ. ಸರ್ಕಾರದ ಸೌಲಭ್ಯಗಳಿಗಾಗಿ ಆಧಾರ್ ಕಾರ್ಡ್‌ಗಳಲ್ಲಿ ದೋಷ ಸರಿಪಡಿಸಲು ಜನ ಪರದಾಡುತ್ತಿದ್ದಾರೆ. ವೃದ್ಧಾಪ್ಯ ವೇತನ, ವಿಧವಾ ವೇತನ, ಇತರೆ ಪಿಂಚಣಿಗಳು ಸಿಗುತ್ತಿಲ್ಲ. ಕೆಲವೊಮ್ಮೆ ಸರ್ಕಾರ ರೂಪಿಸಿ ಜಾರಿಗೆ ತರುವ ನಿಯಮಗಳು ಜನರಿಗೆ ಅರ್ಥವಾಗುದೆ ಗೊಂದಲ್ಲಕ್ಕೀಡಾಗುತ್ತಿದ್ದಾರೆ’ ಎಂದು ಹೇಳಿದರು.
ಆಡಳಿತಕ್ಕೆ ಚುರುಕು: ತಾಲ್ಲೂಕು ಆಡಳಿತ ಸೌಧದಲ್ಲಿ ತಮ್ಮ ಸಮಸ್ಯೆಯ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಸಾಲು ನಿಂತಿದ್ದ ಸಾರ್ವಜನಿಕರ ಬಳಿ ಶಾಸಕ ದರ್ಶನ್ ಪುಟ್ಣಣ್ಣಯ್ಯ ಸಮಸ್ಯೆಯನ್ನು ಆಲಿಸಿದರು. ಅಗತ್ಯವ ದಾಖಲೆ ಪತ್ರಗಳಿಗಾಗಿ ಗ್ರಾಮೀಣ ಪ್ರದೇಶದ ಜನರು ತಿಂಗಳುಗಟ್ಟಲೆ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಕಡತಗಳ ಶೀಘ್ರ ವಿಲೇವಾರಿಗೆ ಕೈಗೊಳ್ಳಬೇಕಾದ ಕ್ರಮ ಸೇರಿದಂತೆ ತಾಲ್ಲೂಕು ಆಡಳಿತವನ್ನು ಚುರುಕುಗೊಳಿಸಲಾಗುವುದು. ಅಗತ್ಯವಿದ್ದರೆ ಅರ್ಜಿ ಸ್ವೀಕರಿಸಲು ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ತಹಶೀಲ್ದಾರ್ ಕೆ.ಸಿ.ಸೌಮ್ಯ, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಕೆನ್ನಾಳು ನಾಗರಾಜು, ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದಯಾನಂದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.