ADVERTISEMENT

ವಿಮಾ ಪರಿಹಾರದಲ್ಲಿ ವಂಚನೆ: ರೈತ ಸಂಘ ಆರೋಪ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 15:52 IST
Last Updated 11 ಜುಲೈ 2024, 15:52 IST

ಕೆ.ಆರ್.ಪೇಟೆ: ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿರುವ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಲ್ಲಿ ವಿಮಾ ಕಂಪನಿ ವಂಚನೆ ಮಾಡಿದೆ ಎಂದು ತಾಲ್ಲೂಕು ರೈತಸಂಘ ಖಂಡಿಸಿದೆ.

ಜಿಲ್ಲಾ ರೈತಸಂಘದ ಮಾಜಿ ಅಧ್ಯಕ್ಷ ಎಂ.ವಿ.ರಾಜೇಗೌಡ ಮಾತನಾಡಿ, ‘ಕೇಂದ್ರ ಸರ್ಕಾರದ ಬೆಳೆ ವಿಮೆ ನೀತಿಗೆ ಅನುಗುಣವಾಗಿ ತಾಲ್ಲೂಕಿನ ಬಹುತೇಕ ರೈತರು ಬೆಳೆ ವಿಮೆ ಮಾಡಿಸಿದ್ದಾರೆ. ಬೆಳೆ ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲ್ಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಬೆಳೆ ನಷ್ಟ ಪರಿಹಾರದ ಹಣ ನೀಡಿದೆ’ ಎಂದರು.

‘ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ. ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ವಹಿಸಿ ಬೆಳೆ ನಷ್ಟಕ್ಕೆ ಒಳಗಾಗಿರುವ ರೈತರಿಗೂ ಪರಿಹಾರ ಹಣ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ರೈತಸಂಘದ ಉಪಾಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಮುಖಂಡರಾದ ಕಾಗೇಪುರ ಮಹೇಶ್, ಸಿಂದಘಟ್ಟ ಮುದ್ದುಕುಮಾರ್, ಕರೋಟಿ ತಮ್ಮಯ್ಯ, ನಗರೂರು ಕುಮಾರ್, ವಡಕೆಶೆಟ್ಟಿಹಳ್ಳಿ ನರಸಿಂಹೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.