ADVERTISEMENT

ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 11:37 IST
Last Updated 4 ಜುಲೈ 2021, 11:37 IST
ಜಿ.ಮಾದೇಗೌಡ
ಜಿ.ಮಾದೇಗೌಡ   

ಮಂಡ್ಯ: ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ. ಭಾನುವಾರ ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ ಗುಂಡೂರಾವ್‌ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.

ADVERTISEMENT

‘ತಂದೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಗುಣಮುಖರಾಗಿ ಬರುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಮಾದೇಗೌಡರ ಪುತ್ರ, ಕಾಂಗ್ರೆಸ್‌ ಮುಖಂಡ ಮಧು ಮಾದೇಗೌಡ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.