ಮಳವಳ್ಳಿ/ಬೆಳಕವಾಡಿ: ಗಗನಚುಕ್ಕಿ ಜಲಪಾತೋತ್ಸವಕ್ಕೆ ರಜಾ ದಿನವಾದ ಭಾನುವಾರ ರಾಜ್ಯದ ವಿವಿಧೆಡೆಯಿಂದ ಸಾವಿಸಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಪ್ರಕೃತಿ ಸೌಂದರ್ಯ ಕಣ್ತುಂಬಿಕೊಂಡರು. ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.
ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಬಂಧ ಪ್ರವಾಸಿಗರು ಗಗನದಿಂದ ದುಮ್ಮುಕ್ಕುವ ನೀರಿಗೆ ಅಳವಡಿಸಿದ ವಿದ್ಯುತ್ ದೀಪಾಂಲಕಾರ ಹಾಗೂ ಲೇಸರ್ ಷೋ ನೋಡಿ ರೋಮಾಂಚನಗೊಂಡರು.
ಲೇಸರ್ ಷೋ ನಡುವೆ ಪ್ರವಾಸಿಗರು ಪೋಟೊ ಕ್ಲಿಕ್ಕಿಸಿಗೊಳ್ಳುವುದಕ್ಕೆ ಮುಗಿಬಿದ್ದರು.
ಜಲಪಾತ ಸಮೀಪದ ಬೃಹತ್ ವೇದಿಕೆಯಲ್ಲಿ ಭಾನುವಾರ ಬೆಳಿಗ್ಗೆ ಸ್ಥಳೀಯ ಕಲಾವಿದರು ನಡೆಸಿಕೊಟ್ಟ ಜಾನಪದ, ಸಂಗೀತ, ಹಾಸ್ಯ ಕಾರ್ಯಕ್ರಮಗಳು ಪ್ರವಾಸಿಗರಿಗೆ ಮುದ ನೀಡಿದವುರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಹಾಗೂ ತಂಡದ ರಸಸಂಜೆ ಮನುಸೂರೆಗೊಂಡಿತು. ಪ್ರವಾಸಿಗರು ಕುಣಿದು ಕುಪ್ಪಳಿಸಿದರು.
ತಾಲ್ಲೂಕಿನ ಬಹುತೇಕ ಗ್ರಾಮಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಇದ್ದುದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಹಲಗೂರು, ಕಿರುಗಾವಲು, ಬಿ.ಜಿ.ಪುರ, ಮಳವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಗೆ ನೂರಾರು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಖಾಸಗಿ ವಾಹನಗಳಲ್ಲಿ ತೆರಳಿದ್ದ ಪ್ರವಾಸಿಗರಿಗೆ ರೊಟ್ಟಿಕಟ್ಟೆ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಭದ್ರತೆ ಒದಗಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.