ADVERTISEMENT

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕಾರ ಅಗತ್ಯ: ಎಸ್.ಚಂದ್ರಪಾಟೀಲ್

​ಪ್ರಜಾವಾಣಿ ವಾರ್ತೆ
Published 12 ಜನವರಿ 2024, 14:14 IST
Last Updated 12 ಜನವರಿ 2024, 14:14 IST
ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್ ಮಾತನಾಡಿದರು. ಪುಟ್ಟರಾಜು, ಶಾಂತಪ್ಪ, ಮರಿಸ್ವಾಮಿ, ನಾಗರಾಜು, ಮರಿಸ್ವಾಮಿ ಭಾಗವಹಿಸಿದ್ದರು.
ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್ ಮಾತನಾಡಿದರು. ಪುಟ್ಟರಾಜು, ಶಾಂತಪ್ಪ, ಮರಿಸ್ವಾಮಿ, ನಾಗರಾಜು, ಮರಿಸ್ವಾಮಿ ಭಾಗವಹಿಸಿದ್ದರು.   

ಮಳವಳ್ಳಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದ್ದು, ಎಲ್ಲರ ಸಹಕಾರ ವಿದ್ದರೆ ಗುಣಮಟ್ಟದ ಶಿಕ್ಷಣ ನೀಡಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್ ತಿಳಿಸಿದರು.

ತಾಲ್ಲೂಕಿನ ದುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಪೋಷಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತಾಪಿ ವರ್ಗಗಳ ಜನರು ತಮ್ಮ ಮಕ್ಕಳ ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮಕ್ಕಳು ಸವಲತ್ತುಗಳನ್ನು ಬಳಕೆ ಮಾಡಿ ಶಿಕ್ಷಣ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ಪ್ರಧಾನ ಭಾಷಣಕಾರರಾಗಿದ್ದ ಭೀಮನಹಳ್ಳಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪುಟ್ಟರಾಜು ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ಎದುರಾಗುವ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ. ಪೋಷಕರು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕು. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಗಳಿಸುವಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇರುತ್ತದೆ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ವೆಂಟಕೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಶಿಕ್ಷಕ ಮರಿಸ್ವಾಮಿ, ಶಿಕ್ಷಕರಾದ ಭಾಸ್ಕರ್, ಸಂತೋಷ್ ಕುಮಾರ್, ಎಂ.ಎಲ್.ಪಾರ್ಥನಾಥ್, ಮುಖಂಡರಾದ ಶಾಂತಪ್ಪ, ಮರಿಸ್ವಾಮಿ, ನಾಗರಾಜು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT