ADVERTISEMENT

ಮಂಡ್ಯ | ಲೋಕಾಯುಕ್ತ ಬಲೆಗೆ ಗ್ರಾ.ಪಂ. ಸದಸ್ಯ ಅನಿಲ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 16:01 IST
Last Updated 11 ನವೆಂಬರ್ 2024, 16:01 IST
<div class="paragraphs"><p>ಕೆ.ಆರ್‌. ಅನಿಲ್‌ಕುಮಾರ್‌</p></div>

ಕೆ.ಆರ್‌. ಅನಿಲ್‌ಕುಮಾರ್‌

   

ಮಂಡ್ಯ: ಶೌಚಾಲಯದ ಬಿಲ್‌ ಪಾಸ್‌ ಮಾಡಿಕೊಡಲು ₹50 ಸಾವಿರ ಲಂಚ ಪಡೆಯುತ್ತಿದ್ದ ಮಂಡ್ಯ ತಾಲ್ಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್‌. ಅನಿಲ್‌ಕುಮಾರ್‌ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ತಾಲ್ಲೂಕಿನ ಕೋಲಕಾರನದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ₹5.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದ ಗುತ್ತಿಗೆದಾರ ಚನ್ನಬಸವೇಗೌಡ ಅವರು ಬಿಲ್‌ ಪಾಸ್‌ ಮಾಡಿಕೊಡಲು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಬಿಲ್‌ ಪಾಸ್‌ ಮಾಡಿಕೊಡಲು ₹50 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಚನ್ನಬಸವೇಗೌಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಮಂಡ್ಯ ನಗರದ ಖಾಸಗಿ ಹೋಟೆಲ್‌ನಲ್ಲಿ ಲಂಚ ಪಡೆಯುವಾಗ ಕಮ್ಮನಾಯಕನಹಳ್ಳಿ ಗ್ರಾಮದ ಅನಿಲ್‌ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್ಪಿ ಸುನಿಲ್‌ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಮೋಹನ್ ರೆಡ್ಡಿ, ಜಯರತ್ನಾ, ಸಿಬ್ಬಂದಿಗಳಾದ ಮಹದೇವಸ್ವಾಮಿ, ಶಂಕರ್, ಶರತ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

‘ತನಿಖೆ ಮುಂದುವರಿದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.