ADVERTISEMENT

ಪಾಂಡವಪುರ | ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಿ: ಎಂ.ಎಸ್.ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 13:23 IST
Last Updated 8 ಜೂನ್ 2024, 13:23 IST
ಮಂಜುನಾಥ್
ಮಂಜುನಾಥ್   

ಪಾಂಡವಪುರ: ‘ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಶೇ 50ರಷ್ಟು ಸಿರಿವಂತರ ಪಾಲಾಗುತ್ತಿದ್ದು, ಇನ್ನಾದರೂ ಸರ್ಕಾರ ಎಚ್ಚೆತ್ತು ಅಗತ್ಯ ಇರುವವರಿಗೆ ಮಾತ್ರ ತಲುಪಿಸುವ ಕಾರ್ಯ ಮಾಡಬೇಕು’ ಎಂದು ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಹಾಗೂ ಕನ್ನಡ ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ಆಗ್ರಹಿಸಿದ್ದಾರೆ.

‘ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗುವುದಲ್ಲದೆ ಆ ಯೋಜನೆಗಳಿಗೆ ಅರ್ಥವಿಲ್ಲದಂತಾಗಿದೆ. ಹೀಗಾಗಿ ನಿರ್ಗತಿಕರು, ಬಡವರು, ಕೂಲಿ ಕಾರ್ಮಿಕರು, ಅತಿ ಸಣ್ಣ ಹಿಡುವಳಿದಾರರನ್ನು ಪ್ರಾಮಾಣಿಕ ಅಧಿಕಾರಿಗಳಿಂದ ಗುರುತಿಸುವ ಕೆಲಸವನ್ನು ಕೂಡಲೇ ಮಾಡುವ ಮೂಲಕ  ಗ್ಯಾರಂಟಿಗಳಿಗೆ ಕಡಿವಾಣ ಹಾಕಲು ಮುಂದಾಗಿ, ಸಾರ್ವಜನಿಕರ ತೆರಿಗೆ ಹಣ ಪೋಲಾಗದಂತೆ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT