ADVERTISEMENT

ಪಾಂಡವಪುರ: ಭಾನುವಾರ ಭತ್ತದ ಗದ್ದೆಯಲ್ಲಿ ನಾಟಿ ಮಾಡಲಿರುವ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 13:58 IST
Last Updated 9 ಆಗಸ್ಟ್ 2024, 13:58 IST
ಪಾಂಡವಪುರ ತಾಲೂಕಿನ ಸೀತಾಪುರ ಜಮೀನಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಹಿನ್ನೆಲೆ ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಸ್ಥಳ ಪರಿಶೀಲನೆ ನಡೆಸಿದರು. ಮಹದೇವು, ಮಿಥುನ್, ಚಲುವರಾಜು, ವಿ.ಎಸ್.ನಿಂಗೇಗೌಡ ಪಾಲ್ಗೊಂಡಿದ್ದರು
ಪಾಂಡವಪುರ ತಾಲೂಕಿನ ಸೀತಾಪುರ ಜಮೀನಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭತ್ತದ ಗದ್ದೆಯಲ್ಲಿ ನಾಟಿ ಮಾಡುವ ಹಿನ್ನೆಲೆ ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಸ್ಥಳ ಪರಿಶೀಲನೆ ನಡೆಸಿದರು. ಮಹದೇವು, ಮಿಥುನ್, ಚಲುವರಾಜು, ವಿ.ಎಸ್.ನಿಂಗೇಗೌಡ ಪಾಲ್ಗೊಂಡಿದ್ದರು   

ಪಾಂಡವಪುರ: ‘ರೈತರಿಗೆ ಆತ್ಮಸ್ಥೈರ್ಯ ತುಂಬಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇದೇ ಭಾನುವಾರ (ಆ.11) ತಾಲ್ಲೂಕಿನ ಸೀತಾಪುರ ಗ್ರಾಮದ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದಾರೆ’ ಎಂದು ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು ಹೇಳಿದರು.

ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಮೂರುವರೆ ಎಕರೆ ಗದ್ದೆಯಲ್ಲಿ ನಾಟಿ ನಡೆಯಲಿದ್ದು, ಶುಕ್ರವಾರ ಸ್ಥಳ ಪರಿಶೀಲಿಸಿದ ಬಳಿಕ ಮಾತನಾಡಿದರು. 

‘ಅಂದು ಬೆಳಿಗ್ಗೆ 10.30ಕ್ಕೆ ಕಾವೇರಿ ಹಾಗೂ ಕಟ್ಟೇರಿ ಬಳಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕೃಷಿ ಕಾರ್ಮಿಕ ಮಹಿಳೆಯರೊಂದಿಗೆ ಭತ್ತ ನಾಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭತ್ತ ಮತ್ತು ಧಾನ್ಯಗಳ ರಾಶಿಗೆ ಪೂಜೆ ನೆರವೇರಿಸುವರು. ಗದ್ದೆ ಸಂಪೂರ್ಣ ನಾಟಿ ಕಾರ್ಯಕ್ರಮ ಮುಗಿಯುವವರೆಗೂ ಇಲ್ಲೇ ಇದ್ದು, ಕೃಷಿ ಕಾರ್ಮಿಕರೊಂದಿಗೆ ಊಟ ಸವಿಯಲಿದ್ದಾರೆ’ ಎಂದರು.

ADVERTISEMENT

ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ನಾಡಗೌಡ ಹಾಗೂ ಜಿಲ್ಲೆ ಹಾಲಿ ಮತ್ತು ಮಾಜಿ ಸಚಿವರು ಮತ್ತು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

‘ವಿಶ್ವೇಶ್ವರಯ್ಯ ನಾಲಾ ಅಚ್ಚಕಟ್ಟು ವ್ಯಾಪ್ತಿಯ ಕೊನೇ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜತೆ ಕುಮಾರಸ್ವಾಮಿ ಅವರು ಮಾತನಾಡಿದರು. ನಾಲೆಗಳಿಗೆ ನೀರು ಹರಿಸಿ ಕೆರೆಕಟ್ಟೆ ತುಂಬಿಸಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಸಮರ್ಥರಿದ್ದು, ಕೇಂದ್ರ ಸಚಿವರ ಸೂಚನೆಯನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ. ವಿಫಲರಾದರೆ ಅವರಿಗೆ ಪಾಠ ಕಲಿಸುವ ಜತೆಗೆ ನಾವೇ ನೀರುಗಂಟಿಗಳಾಗಿ ಕೆಲಸ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಈ ವೇಳೆ ಅರಳಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಮಹದೇವು, ಮಿಥುನ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಚಲುವರಾಜು, ವಿ.ಎಸ್.ನಿಂಗೇಗೌಡ, ಲಕ್ಷö್ಮಣ, ವಿಶ್ವನಾಥ್, ಕುಳ್ಳೇಗೌಡ, ಇಂದ್ರೇಶ್, ಬೈರವ, ದಯಾಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.