ADVERTISEMENT

ಕಾಂಗ್ರೆಸ್‌ಗೆ ಯೋಗೇಶ್ವರ್‌ರನ್ನು ನಾನು ಕರೆತಂದೆ: ಶಾಸಕ ಉದಯ್

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2024, 15:29 IST
Last Updated 25 ಅಕ್ಟೋಬರ್ 2024, 15:29 IST
<div class="paragraphs"><p>ಮದ್ದೂರು ತಾಲ್ಲೂಕಿನ ಕದಲೂರಿನಲ್ಲಿ ಪಶುಪಾಲನಾ ಇಲಾಖೆಯಯಿಂದ ಹಮ್ಮಿಕೊಳ್ಳಲಾಗಿದ್ದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಉಚಿತ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.</p></div>

ಮದ್ದೂರು ತಾಲ್ಲೂಕಿನ ಕದಲೂರಿನಲ್ಲಿ ಪಶುಪಾಲನಾ ಇಲಾಖೆಯಯಿಂದ ಹಮ್ಮಿಕೊಳ್ಳಲಾಗಿದ್ದ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಉಚಿತ ಲಸಿಕೆ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.

   

ಮದ್ದೂರು: ‘ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಪಕ್ಷದ ನಾಯಕರ ಆದೇಶ ಪಾಲನೆ ಮಾಡಿದ್ದೇನೆ’ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲ್ಲೂಕಿನ ಕದಲೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚನ್ನಪಟ್ಟಣ ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂದು ಹಲವು ಬಾರಿ ಹೇಳಿದ್ದೆ. ಅದೇ ರೀತಿಯಲ್ಲೇ, ಸಿ.ಪಿ.ಯೋಗೇಶ್ವರ್ ಪಕ್ಷಕ್ಕೆ ಸೇರ್ಪಡೆಗೊಂಡು ಅಭ್ಯರ್ಥಿಯೂ ಆಗಿದ್ದಾರೆ’ ಎಂದರು.

ADVERTISEMENT

‘ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆಂದು ಮೊದಲೇ ಗೊತ್ತಿತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.