ಮಂಡ್ಯ: ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿದ ಹಾಗೂ ರಾಷ್ಟ್ರದ ಏಕತೆಗೆ ಶ್ರಮಿಸಿದಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಇಂದಿಗೂ ಪ್ರಸ್ತುತವಾಗಿ ನಿಲ್ಲುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಾಪ್ರಭು ಹೇಳಿದರು.
ನಗರದ ನೆಹರೂ ಯುವ ಕೇಂದ್ರದ ಸಭಾಂಗಣದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಭಾನುವಾರ ಆಯೋಜಿಸಿದ್ದ‘ರಾಷ್ಟ್ರೀಯ ಏಕತಾ ದಿವಸ್’ ಕಾರ್ಯಕ್ರಮದಲ್ಲಿ ಪಟೇಲ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಉಕ್ಕಿನ ಮನುಷ್ಯ ಎಂದೇ ಖ್ಯಾತರಾ ಗಿದ್ದಸರ್ದಾರ್ ವಲ್ಲಭಭಾಯಿ ಪಟೇಲ್ ಅವರು,ದೇಶಿಯ ಸಂಸ್ಥಾನಗಳಾಗಿ ಹರಿದು-ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿದ ಮಹನೀಯರು, ಜೊತೆಗೆ ರಾಷ್ಟ್ರದ ಏಕತೆಗೆ ಶ್ರಮಿಸಿದ ಮೇರುವ್ಯಕ್ತಿ ಯಾಗಿ ಕಾಣುತ್ತಾರೆ ಎಂದು
ಅವರು ತಿಳಿಸಿದರು.
‘ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ’ ಎಂಬ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ್ ಬೊಧಿಸಿದರು.
ಸಂತೆಕಸಲಗೆರೆ ಬಸವರಾಜು ಕಲಾತಂಡದವರು ದೇಶಭಕ್ತಿಗೀತೆಗಳ ಗಾಯನ ಪ್ರಸ್ತುತಪಡಿಸಿದರು.
ಜಿಲ್ಲಾ ಯುವ ಸಮನ್ವಯಾಧಿಕಾರಿ ಅನಂತಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜುಮೂರ್ತಿ, ನೆಹರೂ ಯುವ ಕೇಂದ್ರದ ಲೆಕ್ಕಾಧಿಕಾರಿ ಎಚ್.ಎಂ.ಬಸವರಾಜು, ಸಂಘಟಕಿ ಬಿ.ಎಸ್.ಅನುಪಮಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.