ADVERTISEMENT

ಮಳವಳ್ಳಿ | ರಾಷ್ಟ್ರಧ್ವಜಕ್ಕೆ ಅವಮಾನ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 23:50 IST
Last Updated 17 ಆಗಸ್ಟ್ 2024, 23:50 IST
<div class="paragraphs"><p>ಅಮಾನತು</p></div>

ಅಮಾನತು

   

(ಪ್ರಾತಿನಿಧಿಕ ಚಿತ್ರ)

ಮಳವಳ್ಳಿ/ಬೆಳಕವಾಡಿ: ತಾಲ್ಲೂಕಿನ ಉತ್ತೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಯಕ್ಕೆ ಸರಿಯಾಗಿ ರಾಷ್ಟ್ರಧ್ವಜವನ್ನು ಇಳಿಸದ ಆರೋಪದ ಮೇರೆಗೆ ಶಿಕ್ಷಕ ಸೋಮಣ್ಣ ಅವರನ್ನು ಅಮಾನತುಗೊಳಿಸಲಾಗಿದೆ.

ADVERTISEMENT

‘ಆ.15ರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಿದ್ದ ಧ್ವಜವನ್ನು ಆ.16ರವರೆಗೆ ಧ್ವಜಸ್ತಂಭದಿಂದ ಇಳಿಸಿಲ್ಲ’ ಎಂದು ವ್ಯಕ್ತಿಯೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದರು. ‌16ರ ರಾತ್ರಿ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ. ಶ್ರೀನಿವಾಸ್, ಬಿ.ಆರ್.ಸಿ ಸೋಮಣ್ಣ ಸ್ಥಳಕ್ಕೆ ಭೇಟಿ ನೀಡಿದಾಗಲೂ ಧ್ವಜವು ಸ್ತಂಭದಲ್ಲೇ ಇತ್ತು. ‘ಧ್ವಜ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಕ್ಕೆ ವಿರುದ್ಧವಾಗಿ ಶಿಕ್ಷಕರು ವರ್ತಿಸಿದ್ದಾರೆ’ ಎಂದು ಅವರು ‌ವರದಿ ನೀಡಿದ್ದರು.

ವರದಿ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್, ಶಿಕ್ಷಕ ಸೋಮಣ್ಣ ವಿರುದ್ಧ ಶಿಸ್ತುಕ್ರಮ ಹಾಗೂ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.