ADVERTISEMENT

ಕೊಪ್ಪದ ಕೃಷಿ ಪತ್ತಿನ ಸಹಕಾರ ಸಂಘ: ಲಿಂಗರಾಜು ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 17 ಮೇ 2024, 14:46 IST
Last Updated 17 ಮೇ 2024, 14:46 IST
ಮದ್ದೂರು ತಾಲ್ಲೂಕಿನ ಕೊಪ್ಪದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ನಿರ್ದೇಶಕರು ಹಾಜರಿದ್ದರು
ಮದ್ದೂರು ತಾಲ್ಲೂಕಿನ ಕೊಪ್ಪದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ನಿರ್ದೇಶಕರು ಹಾಜರಿದ್ದರು   

ಪ್ರಜಾವಾಣಿ ವಾರ್ತೆ

ಮದ್ದೂರು: ತಾಲ್ಲೂಕಿನ ಕೊಪ್ಪದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧವಾಗಿ ಶುಕ್ರವಾರ ಆಯ್ಕೆಯಾದರು.

ಸಹಕಾರ ಸಂಘದ ಹಿಂದಿನ ಅಧ್ಯಕ್ಷರಾದ ಚಿಕ್ಕೋನಹಳ್ಳಿ ರಾಮಕೃಷ್ಣ ಅವರ ರಾಜೀನಾಮೆ ನೀಡಿದ್ದರು. ಚುನಾವಣಾಧಿಕಾರಿ ಡಿ. ಆಶಾ ಅವರು ಅವಿರೋಧ ಆಯ್ಕೆ ಘೋಷಿಸಿದರು.

ADVERTISEMENT

ಕೆ. ಲಿಂಗರಾಜು ಮಾತನಾಡಿ, ‘ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಪಡೆದು ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರೈತರಿಗೆ ಸಕಾಲಕ್ಕೆ ರಸಗೊಬ್ಬರ ಪೂರೈಕೆ, ಸಾಲ ವಿತರಣೆ, ಷೇರುದಾರರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಹಾಗೂ ಕೊಪ್ಪ ಸಹಕಾರ ಸಂಘವನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ’ ಎಂದರು.

ಕೆ. ಲಿಂಗರಾಜು ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನಿರ್ದೇಶಕರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹೂವಿನ ಹಾರಗಳನ್ನು ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ಕೊಪ್ಪ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಉಪಾಧ್ಯಕ್ಷೆ ಲಕ್ಷ್ಮಮ್ಮ ಈರೇಗೌಡ, ಮಾಜಿ ಉಪಾಧ್ಯಕ್ಷ ಹಾಗೂ ನಿರ್ದೇಶಕ ರಮೇಶ್ ಕೊಪ್ಪ, ನಿರ್ದೇಶಕರಾದ ಎಚ್‌.ವಿ. ಶಿವಣ್ಣ, ಕೆ.ಜೆ. ಕೃಷ್ಣೇಗೌಡ, ರಾಮಕೃಷ್ಣ, ಟಿ. ಕಾಂತರಾಜು, ಕೆ.ಜಿ. ಜಯರಾಮು, ಶಿವಲಿಂಗೇಗೌಡ, ಜಿ.ಪಿ. ಮಂಜುಳ, ಚಂದ್ರಶೇಖರ್, ಟಿ. ಪುಟ್ಟಸ್ವಾಮಿ, ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.