ADVERTISEMENT

ಕೆ.ಆರ್.ಪೇಟೆ | ಹೊಸಹೊಳಲು: ಸಂಭ್ರಮದ ರಂಗದ ಹಬ್ಬ

​ಪ್ರಜಾವಾಣಿ ವಾರ್ತೆ
Published 1 ಮೇ 2024, 12:33 IST
Last Updated 1 ಮೇ 2024, 12:33 IST
ಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿಯ ಹೊಸಹೊಳಲು ಗ್ರಾಮದಲ್ಲಿ ರಂಗದ ಹಬ್ಬದ ಅಂಗವಾಗಿ ರಂಗದ ಕುಣಿತ ನಡೆಯಿತು
ಕೆ.ಆರ್.ಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿಯ ಹೊಸಹೊಳಲು ಗ್ರಾಮದಲ್ಲಿ ರಂಗದ ಹಬ್ಬದ ಅಂಗವಾಗಿ ರಂಗದ ಕುಣಿತ ನಡೆಯಿತು   

ಕೆ.ಆರ್.ಪೇಟೆ: ಪಟ್ಟಣದ ಹೊಸಹೊಳಲು ಗ್ರಾಮದಲ್ಲಿ ರಂಗದ ಹಬ್ಬವು ಸಂಭ್ರಮದಿಂದ ನಡೆಯಿತು.

ರಂಗಸ್ಥಳದಲ್ಲಿ ಆರಾಧ್ಯ ದೈವ ಆಂಜನೇಯ ಸ್ವಾಮಿಯ ಪೂಜಾ ಮಹೋತ್ಸವ, ನಂತರ ದೇವಸ್ಥಾನ ಮುಂಭಾಗದ ರಂಗದಲ್ಲಿ ಜಾತಿಭೇದ, ವಯಸ್ಸಿನ ಅಂತರವಿಲ್ಲದೆ ಗ್ರಾಮದ ಜನರು ತಮಟೆಯ ಸದ್ದಿಗೆ ಹೆಜ್ಜೆ ಹಾಕುವ ಮೂಲಕ ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಸಂಪ್ರದಾಯವನ್ನು ಮೆರೆದರು.

ರಂಗದ ಹಬ್ಬದ ಸಂಭ್ರಮದಲ್ಲಿ ಗ್ರಾಮದ ಜನತೆಯೊಂದಿಗೆ ಸುತ್ತಮುತ್ತಲಿನ ಗ್ರಾಮದ ಜನರೂ ಪಾಲ್ಗೊಂಡಿದ್ದರು. ಗ್ರಾಮದ ರಾಜಬೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತುದ್ದವು. ಗ್ರಾಮದ ಮುಖಂಡರು ನೇತೃತ್ವ ವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.