ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ಪಟ್ಟಣದ ಪುರಸಭೆ ಮುಖ್ಯಾಧಿಕಾರಿಯಾಗಿದ್ದ ರಾಜು ಕೆ. ವಠಾರ (58) ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟರು.
ಪುರಸಭೆ ಕಚೇರಿಯಲ್ಲಿ ಸೋಮವಾರ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಧ್ಯಾಹ್ನ 2.30ರ ಸಮಯದಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಾಲ್ಕು ತಿಂಗಳಿಂದ ಕೆ.ಆರ್.ಪೇಟೆ ಪುರಸಭೆ ಮುಖ್ಯಾಧಿಕಾರಿ ಆಗಿ ಕಾರ್ಯನಿರ್ವಹಣೆ ಮಾಡುವ ಮೂಲಕ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸಿ, ಪುರಸಭೆ ಕಾರ್ಯಗಳಿಗೆ ವೇಗ ನೀಡಿದ್ದರು.
ಅವರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ರಾಜು ಅವರು ಮೂಲತಃ ವಿಜಯಪುರದವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.