ADVERTISEMENT

ಕೆಆರ್‌ಎಸ್‌: 83.7 ಅಡಿ ನೀರು ಸಂಗ್ರಹ

​ಪ್ರಜಾವಾಣಿ ವಾರ್ತೆ
Published 30 ಮೇ 2024, 3:32 IST
Last Updated 30 ಮೇ 2024, 3:32 IST
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬುಧವಾರ ಸಂಜೆ ವೇಳೆಗೆ 83.7 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬುಧವಾರ ಸಂಜೆ ವೇಳೆಗೆ 83.7 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು   

ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಕಳೆದ ಒಂದು ವಾರದ ಈಚೆಗೆ ತುಸು ನೀರು ಹರಿದು ಬಂದಿದ್ದು, ಜಲಾಶಯದ ನೀರಿನ ಮಟ್ಟ ಬುಧವಾರ ಸಂಜೆ ವೇಳೆಗೆ 83.7 ಅಡಿ (ಗರಿಷ್ಠ 124.80 ಅಡಿ)ಗೆ ತಲುಪಿದೆ.

ಒಂದು ವಾರದ ಹಿಂದೆ ಜಲಾಶಯದಲ್ಲಿ 79 ಅಡಿಗಳಷ್ಟು ನೀರಿತ್ತು. ಕಾವೇರಿ ಕಣಿವೆಯಲ್ಲಿ ಮುಂಗಾರು ಪೂರ್ವ ಮಳೆ ಸುರಿದಿದ್ದು, ಜಲಾಶಯಕ್ಕೆ 4.7 ಅಡಿಗಳಷ್ಟು ನೀರು ಹರಿದು ಬಂದಿದೆ. ಜಲಾಶಯಕ್ಕೆ 1,798 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಕುಡಿಯುವ ಉದ್ದೇಶಕ್ಕೆ ನಾಲೆ ಮತ್ತು ನದಿಯ ಮೂಲಕ 542 ಕ್ಯೂಸೆಕ್‌ ನೀರನ್ನು ಹರಿಸಲಾಗುತ್ತಿದೆ.

‘ಸದ್ಯ ಜಲಾಶಯದಲ್ಲಿ 12.51 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 79.72 ಅಡಿಗಳಷ್ಟು ನೀರಿನ ಸಂಗ್ರಹವಿತ್ತು. ಅಣೆಕಟ್ಟೆಗೆ 344 ಕ್ಯೂಸೆಕ್‌ ಒಳ ಹರಿವು ಇದ್ದು, 2991 ಕ್ಯೂಸೆಕ್‌ ಹೊರ ಹರಿವು ದಾಖಲಾಗಿತ್ತು. ಒಟ್ಟು 10.66 ಟಿಎಂಸಿ ಅಡಿ ನೀರಿನ ಸಂಗ್ರಹ ಇತ್ತು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.