ADVERTISEMENT

ಕೆಆರ್‌ಎಸ್‌ ಸುಭದ್ರ, ಆತಂಕ ಬೇಡ: ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 14:29 IST
Last Updated 13 ಆಗಸ್ಟ್ 2024, 14:29 IST
ಎನ್‌. ಚಲುವರಾಯಸ್ವಾಮಿ
ಎನ್‌. ಚಲುವರಾಯಸ್ವಾಮಿ   

ಮಂಡ್ಯ: ‘ಕೆ.ಆರ್‌.ಎಸ್‌ ಅಣೆಕಟ್ಟೆ ನಿರ್ಮಾಣವಾಗಿ 90 ವರ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊನ್ನೆಯಷ್ಟೇ ವರದಿ ಬಂದಿದ್ದು, ಸದ್ಯ ಅಣೆಕಟ್ಟೆ ಸುಭದ್ರವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದ ಎಲ್ಲಾ ಅಣೆಕಟ್ಟೆಗಳ ಸುರಕ್ಷತೆಗೆ ರಚಿಸಲಾಗಿರುವ ಸಮಿತಿಯು ನಿಗಾ ವಹಿಸಲಿದೆ. ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್‌ ಗೇಟ್‌ ತುಂಡಾಗಿದ್ದು, ವರದಿ ಬರುವವರೆಗೆ ವಿರೋಧ ಪಕ್ಷಗಳು ಸುಮ್ಮನಿದ್ದರೆ ಒಳ್ಳೆಯದು’ ಎಂದರು. 

‘ಅಣೆಕಟ್ಟೆ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ. ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಎಂಬಂತೆ, ಬಿಜೆಪಿಯವರಿಗೆ ದೇಶವೆಲ್ಲಾ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ’ ಎಂದು ತಿರುಗೇಟು ನೀಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.