ADVERTISEMENT

ಕುಂಭಮೇಳಕ್ಕೆ ಕೆ.ಆರ್ ಪೇಟೆಯ ಅಂಬಿಗರಹಳ್ಳಿ ಸಜ್ಜು: ಸಚಿವ ಕೆ. ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 9:00 IST
Last Updated 11 ಅಕ್ಟೋಬರ್ 2022, 9:00 IST
ಕೆ.ಗೋಪಾಲಯ್ಯ
ಕೆ.ಗೋಪಾಲಯ್ಯ   

ಬೆಂಗಳೂರು:ಇದೇ 13ರಿಂದ ಕೆ.ಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರದಲ್ಲಿ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. ಕುಂಭಮೇಳಕ್ಕೆ ಅಂಬಿಗರಹಳ್ಳಿ ಸಂಪೂರ್ಣ ಸಜ್ಜಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ವಿಧಾನಸೌಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂಬತ್ತು ವರ್ಷಗಳ ಹಿಂದೆ ಮೊದಲ ಬಾರಿ ಶ ಅಲ್ಲಿ ಕುಂಭಮೇಳ ನಡೆದಿತ್ತು. ಇದೀಗ ಮತ್ತೆ ಆಯೋಜಿಸಲಾಗಿದೆ. ಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ ಎಂದರು.

ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಥ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. 40 ಜನ ಸಾಧು ಸಂತರು ಭಾಗಿಯಾಗಲಿದ್ದಾರೆ. ಭಾಗವಹಿಸುವವರಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ.ಸಂಗಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ADVERTISEMENT

ನುರಿತ ಈಜುಪಟುಗಳು, ಪೊಲೀಸರನ್ನು ನೇಮಕ ಮಾಡಲಾಗಿದೆ‌. ಕುಂಭಮೇಳದಲ್ಲಿ ಪಾಲ್ಗೊಳ್ಳುವವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದಿ ಚುಂಚನಗಿರಿ ಮಠದ ಡಾ.ನಿರ್ಮಲಾನಂದ ನಾಥ ಸ್ವಾಮೀಜಿ, ಸಿಎಂ ಬೊಮ್ಮಾಯಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗಿಯಾಗಲಿದ್ದಾರೆ ಎಂದರು.

13ರಂದು ಮಾದೇಶ್ವರ ದೇವಸ್ಥಾನದ ಉದ್ಘಾಟನೆ ಆಗಲಿದೆ. ಅದು ಸದಾ ಕಾಲ ತೆರೆದಿಡುವ ವ್ಯವಸ್ಥೆ ಮಾಡಲಾಗುವುದು. ರಾಜ್ಯ
ಸರ್ಕಾರದಿಂದ ₹ 2 ಕೋಟಿ‌ ಅನುದಾನ ಒದಗಿಸಲಾಗಿದೆ. ಊಟ, ಪ್ರಸಾದಕ್ಕಾಗಿ ದಾನಿಗಳು ವ್ಯವಸ್ಥೆ ಮಾಡಿದ್ದಾರೆ.ಉಳಿದ ಸಣ್ಣ ಪುಟ್ಟ ಖರೀದಿ ಮಾಡಬೇಕಿದೆ ಎಂದು ಹೇಳಿದರು.

ಸಚಿವ ಕೆ.ಸಿ.ನಾರಾಯಣಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.