ADVERTISEMENT

3 ಮರಿಗಳೊಂದಿಗೆ ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 13 ಜನವರಿ 2024, 12:50 IST
Last Updated 13 ಜನವರಿ 2024, 12:50 IST
ಕನ್ನಲಿ ಗ್ರಾಮದ ಬಳಿಯ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು
ಕನ್ನಲಿ ಗ್ರಾಮದ ಬಳಿಯ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು   

ಮಂಡ್ಯ: ತಾಲ್ಲೂಕಿನ ಕನ್ನಲಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಮೂರು ಮರಿಗಳೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ.

ಗ್ರಾಮದ ಶ್ರೀನಿವಾಸ್ ಎಂಬುವವರ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಕಾಣಿಸಿಕೊಂಡವು. ಮೂರು ಮರಿಗಳಲ್ಲಿ ಒಂದು ಚಿರತೆ ಮರಿ ಗ್ರಾಮಸ್ಥರಿಗೆ ಸಿಕ್ಕಿದ್ದು ಅದನ್ನು ರಕ್ಷಣೆ ಮಾಡಿದ್ದಾರೆ. ಮರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಯ ಸುಪರ್ದಿಗೆ ನೀಡಿದ್ದಾರೆ. ಇನ್ನೆರಡು ಮರಿಗಳನ್ನು ತಾಯಿ ಚಿರತೆ ಕಚ್ಚಿಕೊಂಡು ಹೋಗಿದೆ. ಚಿರತೆಗಳು ಗದ್ದೆಯಲ್ಲೇ ಇರುವ ಕಾರಣ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಬೋರಾಪುರ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಜಮೀನಿನಲ್ಲಿ ಕಾರ್ಮಿಕರು ಕಬ್ಬು ಕಟಾವು ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಮರಿಗಳು ಪತ್ತೆಯಾದವು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.