ADVERTISEMENT

ಮಂಡ್ಯ ಸಾಹಿತ್ಯ ಸಮ್ಮೇಳನ: ಪ್ರತಿನಿಧಿ ನೋಂದಣಿಗೆ ತಲಾ ₹600 ಶುಲ್ಕ ನಿಗದಿ

ಸಚಿವರಿಂದ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 16:06 IST
Last Updated 16 ನವೆಂಬರ್ 2024, 16:06 IST
   

ಮಂಡ್ಯ: ‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್‌ ನೋಂದಣಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಶನಿವಾರ ಕೆ.ಆರ್‌.ಎಸ್‌. ಬೃಂದಾನವದಲ್ಲಿರುವ ರಾಯಲ್ ಆರ್ಕಿಡ್‌ ಹೋಟೆಲ್‌ನಲ್ಲಿ ಚಾಲನೆ ನೀಡಿದರು.

ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೋಂದಣಿಯಾಗಿ ಭಾಗವಹಿಸಲು ₹600 ನಿಗದಿಯಾಗಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನ ಅವಕಾಶ ನೀಡಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ‌ ಪಾವತಿ ಕೂಡ ಆನ್‌ಲೈನ್ ಮೂಲಕ‌ ಮಾಡಬೇಕಿರುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ನೋಂದಣಿಯಾಗುವವರಿಗೆ ವಸತಿಯ ಸ್ಥಳ, ವಿಳಾಸ, ನೋಡಲ್ ಅಧಿಕಾರಿಗಳ ಮೊಬೈಲ್ ಸಂಖ್ಯೆ ಹಾಗೂ ಆನ್‌ಲೈನ್‌ನಲ್ಲೇ ನಲ್ಲೇ ಫೋಟೋ ಸಹಿತ ಗುರುತಿನ ಚೀಟಿ ಒದಗಿಸಲಾಗುವುದು ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ, ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಕಸಾಪ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿ ಕೃಷ್ಣೇಗೌಡ ಹುಸ್ಕೂರು, ಹರ್ಷ ಪೆನ್ನದೊಡ್ಡಿ, ಅಪ್ಪಾಜಪ್ಪ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.