ADVERTISEMENT

ವಿಧಾನ ಪರಿಷತ್‌ ಚುನಾವಣೆ: ಡಾ.ಕೆ. ಸುಧಾಕರ್‌– ನಾರಾಯಣ ಗೌಡ ಜಟಾಪಟಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 22:32 IST
Last Updated 15 ಡಿಸೆಂಬರ್ 2021, 22:32 IST
ಕೆ. ಸುಧಾಕರ್‌– ನಾರಾಯಣ
ಕೆ. ಸುಧಾಕರ್‌– ನಾರಾಯಣ   

ಬೆಳಗಾವಿ (ಸುವರ್ಣ ವಿಧಾನಸೌಧ): ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ.ಕೆ. ಸುಧಾಕರ್‌ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಬುಧವಾರ ಜಟಾಪಟಿಗೆ ಕಾರಣವಾಯಿತು.

ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ‘ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಬಂದಿದೆ. ಇದು ನಿಜಕ್ಕೂ ದುರದೃಷ್ಟಕರ. ಈ ಕುರಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಸುತ್ತೇವೆ’ ಎಂದರು.

ಆರೋಗ್ಯ ಸಚಿವರ ಹೇಳಿಕೆಗೆತಕ್ಷಣವೇ ಪ್ರತಿಕ್ರಿಯೆ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ‘ಸುಧಾಕರ್‌ ಏನು ನಮ್ಮ ನಾಯಕರಾ? ಅವರು ಅವರ ಕ್ಷೇತ್ರದ ಬಗ್ಗೆ ಮಾತನಾಡಲಿ. ನಾವು ನಮ್ಮ ಕ್ಷೇತ್ರದ ಬಗ್ಗೆ ಹೇಳುತ್ತೇವೆ. ಮಂಡ್ಯದ ಬಗ್ಗೆ ಅವರಿಗೆ ಏನು ಗೊತ್ತು? ನನಗೆ ಗೊತ್ತಿದೆ, ನಾನು ಮಾತನಾಡುತ್ತೇನೆ’ ಎಂದು ಹೇಳಿದರು.

ADVERTISEMENT

‘ಪ್ರಾಮಾಣಿಕವಾಗಿ ಚುನಾವಣೆ ಎದುರಿಸಿದ್ದೇವೆ. ಪಕ್ಷ ಬೆಳೆಸುವ ಜವಾಬ್ದಾರಿ ಇದೆ. ನಾನು ಜವಾಬ್ದಾರಿಯಿಂದಲೇ ಕೆಲಸ ಮಾಡುತ್ತಿದ್ದೇನೆ. ಕೊನೆಯ ಕ್ಷಣದಲ್ಲಿ ನಮ್ಮ ಅಭ್ಯರ್ಥಿ ಸ್ವಲ್ಪ ಧೈರ್ಯ ತೋರಿಸಲಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.