ADVERTISEMENT

ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಕೇಂದ್ರ ಸರ್ಕಾರದ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2018, 14:16 IST
Last Updated 2 ಸೆಪ್ಟೆಂಬರ್ 2018, 14:16 IST

ಮಂಡ್ಯ: ಉದ್ಯೋಗ ಖಾತ್ರಿ ಯೋಜನೆ ಸಹಾಯದಿಂದ ಬಯಲು ಶೌಚಾಲಯ ಮುಕ್ತಗೊಂಡಿರುವ ಜಿಲ್ಲೆಗೆ ಕೇಂದ್ರ ಸರ್ಕಾರದ ವಾರ್ಷಿಕ ಪ್ರಶಸ್ತಿ ಸಂದಿದೆ. ಸೆ.11ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯು ಉದ್ಯೋಗಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಪ್ರಶಸ್ತಿ ನೀಡುತ್ತದೆ. ಪ್ರಶಸ್ತಿಗೆ ವಿವಿಧ ರಾಜ್ಯಗಳ 18 ಜಿಲ್ಲೆಗಳು ಆಯ್ಕೆಯಾಗಿದ್ದು ರಾಜ್ಯದಿಂದ ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳು ಪ್ರಶಸ್ತಿ ಪಡೆದಿವೆ.

ಜಿಲ್ಲೆಯ 234 ಗ್ರಾಮ ಪಂಚಾಯಿತಿಗಳ 3.52 ಲಕ್ಷ ಕುಟುಂಬಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದು, ಜಿಲ್ಲೆ ಶೇ 100ರಷ್ಟು ಸಾಧನೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಅ. 2, 2017ರಂದು ‘ಬಯಲು ಶೌಚ ಮುಕ್ತ ಜಿಲ್ಲೆ’ ಘೋಷಣೆ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.