ADVERTISEMENT

ಹಲಗೂರು: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಡಿ. 17ಕ್ಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 13:26 IST
Last Updated 14 ಡಿಸೆಂಬರ್ 2023, 13:26 IST
ಹಲಗೂರಿನಲ್ಲಿ ಡಿ.17 ರಂದು ನಡೆಯುವ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಹಲಗೂರಿನಲ್ಲಿ ಡಿ.17 ರಂದು ನಡೆಯುವ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.   

ಹಲಗೂರು: ‘ಲಯನ್ಸ್ ಕ್ಲಬ್ ಅಫ್ ಹಲಗೂರು, ಡಿ.ಆರ್.ಗುರು-ಶಿಷ್ಯರ ಬಳಗ ಮತ್ತು ಕ್ರೀಯಾಶೀಲ ಆಸ್ಪತ್ರೆ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದೆ’ ಎಂದು ಹಲಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಸುರೇಶ್ ತಿಳಿಸಿದರು.

ಹಲಗೂರಿನಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ,‘ಹಲಗೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಇದೇ 17ಕ್ಕೆ ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 4ಕ್ಕೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಜೊತೆಗೆ ಇದೇ ದಿನ ರಕ್ತದಾನ ಶಿಬಿರ ನಡೆಯಲಿದ್ದು, ರಕ್ತದಾನಿಗಳು ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ ರೋಗ ಚಿಕಿತ್ಸೆ, ಮೂತ್ರ ರೋಗ ಮತ್ತು ಲೈಂಗಿಕ ಚಿಕಿತ್ಸೆ, ಸ್ತ್ರೀ ರೋಗ ಚಿಕಿತ್ಸೆ, ಸಕ್ಕರೆ ಖಾಯಿಲೆ ಚಿಕಿತ್ಸೆ, ನರರೋಗ ಚಿಕಿತ್ಸೆ, ಮೂಳೆ, ಕಿವಿ, ಮೂಗು, ಗಂಟಲು ಚಿಕಿತ್ಸೆ, ಮನೋ ರೋಗ ಚಿಕಿತ್ಸೆ, ಹೃದ್ರೋಗ ಚಿಕಿತ್ಸೆ, ದಂತ ಚಿಕಿತ್ಸೆ, ಚರ್ಮರೋಗ ಚಿಕಿತ್ಸೆಗಳು ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ದೊರೆಯಲಿದೆ.

ADVERTISEMENT

 ತಪಾಸಣೆಗೆ ಒಳಗಾಗುವವರು ಹಳೆಯ ವೈದ್ಯಕೀಯ ತಪಾಸಣಾ ದಾಖಲೆಗಳಿದ್ದಲ್ಲಿ ತಪ್ಪದೇ ತರಬೇಕು. ಹಲಗೂರು ಸುತ್ತಮುತ್ತಲಿನ ಸಾರ್ವಜನಿಕರು ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಸದಸ್ಯರಾದ ಎನ್.ಕೆ.ಕುಮಾರ್, ಡಿ‌.ಎಲ್. ಮಾದೇಗೌಡ, ಶ್ರೀನಿವಾಸ್, ಪ್ರಕಾಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.