ADVERTISEMENT

ಪ್ರವಾಸಿ ತಾಣ ಅಭಿವೃದ್ಧಿಗೆ ಯೋಜನೆ ರೂಪಿಸಿ: ಶಾಸಕ ರಮೇಶ್ ಬಂಡಿಸಿದ್ದೇಗೌಡ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2023, 13:22 IST
Last Updated 5 ಡಿಸೆಂಬರ್ 2023, 13:22 IST

ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಪ್ರವಾಸಿ ತಾಣಗಳಿದ್ದು, ಅವುಗಳ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಿ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗಿನ ಸಭೆಯ‌ಲ್ಲಿ ಅವರು ಮಾತನಾಡಿದರು.

ಶ್ರೀರಂಗಪಟ್ಟಣದಲ್ಲಿರುವ ಪ್ರವಾಸಿ ತಾಣಗಳಲ್ಲಿ ಕೆಲವು ಸ್ಥಳಗಳು ಕೇಂದ್ರ ಹಾಗೂ ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯ ಇಲಾಖೆಗೆ ಒಳಪಡುತ್ತದೆ. ಇಲ್ಲಿ ಕೆಲಸ ನಡೆಸಲು ಅವರ ಅನುಮತಿ ಅಗತ್ಯ. ಈ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳು ಒಟ್ಟಿಗೆ ಸೇರಿ ಚರ್ಚಿಸಿ ಯೋಜನೆ ರೂಪಿಸಬೇಕು ಎಂದರು.

ADVERTISEMENT

ಶ್ರೀ ರಂಗನಾಥ ಸ್ವಾಮಿ ದೇವಾಲಯದಲ್ಲಿ ಕೆಮಿಕಲ್ ವಾಷ್, ಗುಂಬಜ್, ದರಿಯಾ ದೌಲತ್, ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಾಹನ ನಿಲುಗಡೆ, ಸ್ವಚ್ಛತೆ, ಇನ್ನಿತರ ಮೂಲ ಸೌಕರ್ಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಕುಮಾರ, ಉಪವಿಭಾಗಾಧಿಕಾರಿ ನಂದೀಶ್, ಮುಜರಾಯಿ ತಹಶೀಲ್ದಾರ್ ತಮ್ಮೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.