ಮಳವಳ್ಳಿ: ವಿದ್ಯುತ್ ಸೋರಿಕೆ ತಡೆಗಟ್ಟುವುದರ ಜೊತೆಗೆ ಉಳಿತಾಯದೊಂದಿಗೆ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಎಲ್‌ಟಿಎಬಿ ವಿದ್ಯುತ್ ಕೇಬಲ್ ಅಳವಡಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.
ಪಟ್ಟಣದ ಸಿದ್ದಾರ್ಥ ನಗರದಲ್ಲಿ ಎಲ್ ಟಿ ವಿದ್ಯುತ್ ವಾಹಕವನ್ನು ಬದಲಾಯಿಸಿ ಎಲ್‌ಟಿಎಬಿ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಳೆಗಾಲದ ಸಂದರ್ಭ ವಿದ್ಯುತ್ ಅಡಚಣೆ, ಸೋರಿಕೆ ಹಾಗೂ ಅಪಘಾತ ನಿಯಂತ್ರಿಸುವ ಜೊತೆಗೆ ವಿದ್ಯುತ್ ಅಕ್ರಮ ಸಂಪರ್ಕಕ್ಕೆ ಕಡಿವಾಣ ಹಾಕಲು ಇಂಥಹ ಕೇಬಲ್ ಅಳವಡಿಕೆ ಸಹಕಾರಿಯಾಗಿದೆ. ಪಟ್ಟಣದೆಲ್ಲಡೆ ಸುಮಾರು ₹5 ಕೋಟಿ ವೆಚ್ಚದಲ್ಲಿ ಕೇಬಲ್ ಬದಲಾಯಿಸಲಾಗುತ್ತಿದೆ. ಸರ್ಕಾರದ ಹಲವು ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಎಸ್. ಪ್ರೇಮ್ ಕುಮಾರ್ ಮಾತನಾಡಿ, ‘ಗ್ರಾಮೀಣ ಭಾಗಕ್ಕೂ ಕೇಬಲ್ ವಿಸ್ತರಿಸಲು ಹೆಚ್ಚುವರಿಯಾಗಿ ₹ 5 ಕೋಟಿ ಅನುದಾನ ಬಿಡುಗಡೆಗೆ ಶಾಸಕರು ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನದ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೊಡ್ಡಯ್ಯ, ಸಿ.ಪಿ.ರಾಜು, ಮನ್‌ಮುಲ್ ನಿರ್ದೇಶಕ ಆರ್.ಎನ್. ವಿಶ್ವಾಸ್, ಪುರಸಭೆ ಸದಸ್ಯರಾದ ಎಂ.ಎನ್. ಶಿವಸ್ವಾಮಿ, ಪ್ರಮೀಳಾ, ಎಂ.ಡಿ. ಸಂತೋಷ್, ಬಸವರಾಜು, ಆನಂದ್ ಕುಮಾರ್, ಐಯೂಬ್ ಪಾಷ, ಎಚ್. ಬಸವರಾಜು, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಟಿ. ಪುಟ್ಟಸ್ವಾಮಿ, ಗ್ರಾಮೀಣ ಭಾಗದ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವೈ.ಸಿ. ನಿತ್ತೇಶ, ಮುಖಂಡರಾದ ಕಿರಣ್ ಶಂಕರ್, ಮಂಜುನಾಥ್, ನಾರಾಯಣಸ್ವಾಮಿ, ಚೇತನ್ ನಾಯಕ್, ಶಂಕರಮೂರ್ತಿ, ಅಜೀದ್, ಅಶೋಕ್, ನಾಗಣ್ಣ, ವಿಷಕಂಠಮೂರ್ತಿ, ಸಿದ್ದರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.