ADVERTISEMENT

ನಾಗಮಂಗಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ; ನಿವೃತ್ತ ಶಿಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 13:25 IST
Last Updated 11 ಸೆಪ್ಟೆಂಬರ್ 2024, 13:25 IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾದ ಕಾರು ನುಜ್ಜುಗುಜ್ಜಾಗಿರುವುದು‌.
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಗೆ ಪಲ್ಟಿಯಾದ ಕಾರು ನುಜ್ಜುಗುಜ್ಜಾಗಿರುವುದು‌.   

ನಾಗಮಂಗಲ: ತಾಲ್ಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಿರುಮಲಾಪುರ ಗೇಟ್ ಬಳಿ ಮಂಗಳವಾರ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಗೆ ಮಗುಚಿಬಿದ್ದು, ಹಾಸನ ಜಿಲ್ಲೆಯ ಆಲೂರಿನ ನಿವೃತ್ತ ಶಿಕ್ಷಕ  ಚಂದ್ರಶೆಟ್ಟಿ(75)  ಮೃತಪಟ್ಟಿದ್ದಾರೆ.

ಚಂದ್ರಶೆಟ್ಟಿ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದಾಗ ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಅವರನ್ನುಸ್ಥಳೀಯರು  ಆಸ್ಪತ್ರೆಗೆ ದಾಖಲಿಸಿದ್ದರೂ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

 ಬೆಳ್ಳೂರು ಪೋಲಿಸರು  ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು  ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.  ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.