ADVERTISEMENT

ನಾಗಮಂಗಲ ಗಲಭೆ: ಡಿವೈಎಸ್ಪಿ ಅಮಾನತು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 15:50 IST
Last Updated 19 ಸೆಪ್ಟೆಂಬರ್ 2024, 15:50 IST
   

ಮಂಡ್ಯ: ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್‌ ಎ.ಆರ್‌. ಅವರನ್ನು ಅಮಾನತು ಮಾಡಲಾಗಿದೆ.

ಮಂಡ್ಯ ಸಿ.ಇ.ಎನ್‌ ಪೊಲೀಸ್‌ ಠಾಣೆಯ ಡಿವೈಎಸ್ಪಿ ಶಿವಮೂರ್ತಿ ಜಿ.ಆರ್‌. ಅವರಿಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಗಲಭೆಗೆ ಸಂಬಂಧಿಸಿದಂತೆ ಈಚೆಗೆ ನಾಗಮಂಗಲ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.