ಭಾರತೀನಗರ: ಇಲ್ಲಿನ ಕರೀಂಸಾಬ್ ಎಂಬವರ ಮನೆಯಲ್ಲಿ ಮುಸ್ಲಿಂಮರ ಸಾಮೂಹಿಕ ಪ್ರಾರ್ಥನೆಗೆ ಸ್ಥಳೀಯರು ಹಾಗೂ ಬಿಜೆಪಿ, ಜೆಡಿಎಸ್ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರಿಂದ, ಶುಕ್ರವಾರ ಬೆಳಿಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸೆಪ್ಟೆಂಬರ್‌ನಲ್ಲೂ ಇಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿರೋಧ ವ್ಯಕ್ತವಾಗಿತ್ತು. ಶುಕ್ರವಾರವೂ ಜಿಲ್ಲೆಯ ವಿವಿಧೆಡೆಯಿಂದ ಮುಸ್ಲಿಮರು ಬರುತ್ತಿದ್ದಾರೆಂಬ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ನೀಡಿ, ಕ್ರಮ ಕೈಗೊಳ್ಳುವಂತೆ ಮುಖಂಡರು ಆಗ್ರಹಿಸಿದ್ದರು. ಈ ಬೆಳವಣಿಗೆಯಿಂದ ಕರೀಂಸಾಬ್ ಅವರೂ ಮನೆಗೆ ಬೀಗ ಹಾಕಿದ್ದರು.
‘ನಮಾಜ್ ಹಾಗೂ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡಬಾರದು’ ಎಂದು ಕೋರಿ, ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಮುಖಂಡರು, ಇಲ್ಲಿನ ಉಪ ತಹಶಿಲ್ದಾರ್ ಶಿವಲಿಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಅವರಿಗೆ ಮನವಿ ಸಲ್ಲಿಸಿದರು. ಜೆಡಿಎಸ್ ಮುಖಂಡ ಅಣ್ಣೂರು ನವೀನ್, ಕೆ.ಟಿ.ಸುರೇಶ್, ರಾಘವೇಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.