ಮಂಡ್ಯ: ಇಲ್ಲಿಯ ಮಂಡ್ಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಕೆ. ಶಿವಚಿತ್ತಪ್ಪ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಪ್ರೊ.ಶಿವಚಿತ್ತಪ್ಪ ಅವರು ತೂಬಿನಕೆರೆ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದರು.
ಮಾಧ್ಯಮದವರೊಂದಿಗೆ ಅವರು ಮಾತನಾಡಿ, ‘ನೂತನ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ್ದೇನೆ. ರಾಜ್ಯಪಾಲರು ನನ್ನನ್ನು ಕುಲಪತಿಯಾಗಿ ನೇಮಿಸಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮಂಡ್ಯ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.
‘25 ವರ್ಷಗಳಿಂದ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸಿರುವ ಅನುಭವ ಇದೆ. ಮಂಡ್ಯ ವಿವಿ ಅಭಿವೃದ್ಧಿಗೆ ಸಾಕಷ್ಟು ಕನಸು ಇದೆ. ಉಪನ್ಯಾಸಕರ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಮೈಸೂರು ವಿವಿ ರೀತಿಯಲ್ಲಿ ಮಂಡ್ಯ ವಿವಿ ಅಭಿವೃದ್ಧಿ ಆಗುವಂತೆ ನೋಡಿಕೊಳ್ಳಲು ಎಲ್ಲರ ಸಹಕಾರ ಬೇಕು’ ಎಂದು ಮನವಿ ಮಾಡಿದರು.
ಹಿಂದಿನ ಕುಲಪತಿಗಳಾಗಿದ್ದ ಪ್ರೊ.ಪುಟ್ಟರಾಜು ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಕುಲಪತಿಗಳಿಗೆ ಉಪನ್ಯಾಸಕರಾದ ಬಿ.ಎಸ್.ನಾಗರಾಜು, ಭಾರತಿ, ಚಂದನ, ಡಾ.ಮಲ್ಲೇಶ್, ಡಾ.ಕವಿತಾ ಅವರು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.