ಪಾಂಡವಪುರ: ‘ರೈತರ ಪರವಿರುವ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಬೆಂಬಲಿಸಿ, ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದರು.
ತಾಲ್ಲೂಕಿನ ವಿವಿಧೆಡೆ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದ ಅವರು, ‘ಸ್ಟಾರ್ ಚಂದ್ರು ಅವರು ಮೃದು ಸ್ವಭಾವದವರು. ಉದ್ಯಮಿಯಾಗಿರುವ ಅವರು 5 ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ಈಗ ಜನಸೇವೆ ಮಾಡಲು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದಾರೆ’ ಎಂದರು.
‘ವಿಶ್ವದಲ್ಲೇ ಎಲ್ಲೂ ಇಲ್ಲದ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದೆ. ಆ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡಿದೆ. ಕೇಂದ್ರದಲ್ಲಿ ಇಂಡಿಯಾ ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ಬೆಂಬಲ ನೀಡಲಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಿ’ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮಾತನಾಡಿ, ‘ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಸರಳ ವ್ಯಕ್ತಿತ್ವವುಳ್ಳವರು. ಹೀಗಾಗಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನತೆ ಹೆಚ್ಚು ಮತಗಳಿಂದ ಶಾಸಕರನ್ನಾಗಿ ಮಾಡಿದಂತೆ ಸ್ಟಾರ್ ಚಂದ್ರು ಅವರನ್ನು ಸಂಸದರನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.
ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ‘ಜಿಲ್ಲೆಯ ಜನರು ನನ್ನ ಕೈ ಹಿಡಿಯುವ ಮೂಲಕ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು. ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ನಿಲ್ಲಬೇಕು’ ಎಂದು ಮನವಿ ಮಾಡಿದರು.
ತಾಲ್ಲೂಕಿನ ನಾರಾಯಣಪುರ, ಚಿನಕುರಳಿ, ಹೊನಗಾನಹಳ್ಳಿ, ರಾಗಿಮುದ್ದನಹಳ್ಳಿ, ಡಿಂಕಾ, ಬನ್ನಂಗಾಡಿ, ಕಟ್ಟೇರಿ, ಅರಳಕುಪ್ಪೆ, ಹರವು, ಕ್ಯಾತನಹಳ್ಳಿ, ಕೆನ್ನಾಳು ಹಾಗೂ ಕೆ.ಬೆಟ್ಟಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಪ್ರಚಾರದ ವೇಳೆ ಸ್ಟಾರ್ ಚಂದ್ರು ಅವರಿಗೆ ಆರತಿ ಎತ್ತಿ, ಪಟಾಕಿ ಸಿಡಿಸಿ, ಬಾದಾಮಿ ಹಾರ ಹಾಗೂ ಬಾರಿ ಗಾತ್ರದ ಹೂ ಮಾಲೆ ಹಾಕಿ ಸ್ವಾಗತಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕಿಸಾನ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಸಿ.ಆರ್.ರಮೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು, ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ ಇದ್ದರು.
Graphic text / Statistics - ಪಾಂಡವಪುರ: ‘ರೈತರ ಪರವಿರುವ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಬೆಂಬಲಿಸಿ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದರು. ತಾಲ್ಲೂಕಿನ ವಿವಿಧೆಡೆ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದ ಅವರು ‘ಸ್ಟಾರ್ ಚಂದ್ರು ಅವರು ಮೃದು ಸ್ವಭಾವದವರು. ಉದ್ಯಮಿಯಾಗಿರುವ ಅವರು 5 ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ಈಗ ಜನಸೇವೆ ಮಾಡಲು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದಾರೆ’ ಎಂದರು. ‘ವಿಶ್ವದಲ್ಲೇ ಎಲ್ಲೂ ಇಲ್ಲದ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದೆ. ಆ ಮೂಲಕ ಜನಸಾಮಾನ್ಯರ ಬದುಕನ್ನು ಹಸನು ಮಾಡಿದೆ. ಕೇಂದ್ರದಲ್ಲಿ ಇಂಡಿಯಾ ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ಬೆಂಬಲ ನೀಡಲಿದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಿ’ ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮಾತನಾಡಿ ‘ಗೆದ್ದ ವರ್ಷದೊಳಗೆ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದೆ. ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಸರಳ ವ್ಯಕ್ತಿತ್ವವುಳ್ಳವರು. ರಾಜಕಾರಣದಿಂದ ಹಣ ಮಾಡಲು ಬಂದಿಲ್ಲ ಜನರ ಅಭಿವೃದ್ದಿಗೆ ಹಣ ವ್ಯಯಿಸಲಿದ್ದಾರೆ. ಹೀಗಾಗಿ ದರ್ಶನ್ ಪುಟ್ಟಣ್ಣಯ್ಯನವರನ್ನು ಕ್ಷೇತ್ರದ ಜನತೆ ಹೆಚ್ಚು ಮತಗಳಿಂದ ಶಾಸಕರನ್ನಾಗಿ ಮಾಡಿದಂತೆ ಸ್ಟಾರ್ ಚಂದ್ರು ಅವರನ್ನು ಸಂಸದರನ್ನಾಗಿ ಮಾಡಬೇಕು ಎಂದು ಮನವಿ ಮಾಡಿದರು. ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ ‘ಉಳುವವನೇ ಭೂಮಿ ಒಡೆಯ ಕಾಯ್ದೆ ಜಾರಿ ತಂದು ರೈತರನ್ನು ಭೂ ಒಡೆಯರನ್ನಾಗಿ ಮಾಡಿದ್ದು ಕಾಂಗ್ರೆಸ್. ನನ್ನ ಗೆಲುವು ರೈತರ ಗೆಲುವು ಜಿಲ್ಲೆಯ ಸ್ವಾಭಿಮಾನದ ಅಳಿವು ಉಳಿವು ಮಂಡ್ಯ ಜನರ ಕೈಯಲ್ಲಿದೆ. ಜನ್ಮ ಕೊಟ್ಟ ಈ ಮಣ್ಣಿನ ಋಣ ತೀರಿಸಲು ಬಂದಿದ್ದೀನಿ. ಜಿಲ್ಲೆಯ ಜನರು ನನ್ನ ಕೈ ಹಿಡಿಯುವ ಮೂಲಕ ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು. ಉತ್ತಮ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ನಿಲ್ಲಬೇಕು’ ಎಂದು ಮನವಿ ಮಾಡಿದರು. ತಾಲ್ಲೂಕಿನ ನಾರಾಯಣಪುರ ಚಿನಕುರಳಿ ಹೊನಗಾನಹಳ್ಳಿ ರಾಗಿಮುದ್ದನಹಳ್ಳಿ ಡಿಂಕಾ ಬನ್ನಂಗಾಡಿ ಕಟ್ಟೇರಿ ಅರಳಕುಪ್ಪೆ ಹರವು ಕ್ಯಾತನಹಳ್ಳಿ ಕೆನ್ನಾಳು ಹಾಗೂ ಕೆ.ಬೆಟ್ಟಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು. ಪ್ರಚಾರದ ವೇಳೆ ಸ್ಟಾರ್ ಚಂದ್ರು ಅವರಿಗೆ ಆರತಿ ಎತ್ತಿ ಪಟಾಕಿ ಸಿಡಿಸಿ ಬಾದಾಮಿ ಹಾರ ಹಾಗೂ ಬಾರಿ ಗಾತ್ರದ ಹೂ ಮಾಲೆ ಹಾಕಿ ಸ್ವಾಗತಿಸಿದ ದೃಶ್ಯಗಳು ಎಲ್ಲೆಡೆ ಕಂಡು ಬಂದಿತ್ತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ ಕಿಸಾನ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಸಿ.ಆರ್.ರಮೇಶ್ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಾಲ್ಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.