ಮಂಡ್ಯ: ಇಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ₹25 ಕೋಟಿ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ.
ಸಮ್ಮೇಳನಕ್ಕೆ ₹30 ಕೋಟಿ ಬಿಡುಗಡೆ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ಗೆ ಸಹಾಯಾನುದಾನದಡಿ ₹10 ಕೋಟಿ ಮತ್ತು ಹೆಚ್ಚುವರಿಯಾಗಿ ₹15 ಕೋಟಿಯನ್ನು ಮಂಡ್ಯ ಜಿಲ್ಲಾಡಳಿತಕ್ಕೆ ಬಿಡುಗಡೆ ಮಾಡಲು ಆದೇಶಿಸಿದೆ.
‘ಹಂಚಿಕೆಯಾದ ಅನುದಾನದ ಮಿತಿಯಲ್ಲಿಯೇ ಯೋಜನೆ ರೂಪಿಸಬೇಕು. ಅಂದಾಜು ವೆಚ್ಚ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಪಡೆದು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಮಂಡ್ಯ ಜಿಲ್ಲಾಡಳಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಗೀತಾಬಾಯಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.