ಕೆ.ಆರ್.ಪೇಟೆ: ಪಟ್ಟಣ ಪೋಲಿಸ್ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಶಾರದಾ ಮತ್ತು ಅಸ್ಮಬಾನು ಅವರಿಗೆ ಸೀಮಂತ ಕಾರ್ಯ ನಡೆಸುವ ಮೂಲಕ ಮಡಿಲು ತುಂಬಿ, ಶುಭ ಹಾರೈಸಿದರು.
ಸರ್ಕಲ್ ಇನ್‌ಸ್ಪೆಕ್ಟರ್ ಸುಮಾರಾಣಿ ನೇತೃತ್ವದಲ್ಲಿ ನಡೆದ ಸೀಮಂತ ಕಾರ್ಯಕ್ರಮದಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಸಹೋದ್ಯೋಗಿಗಳಾದ ಇಬ್ಬರು ಮಹಿಳಾ ಪೇದೆಗಳಿಗೆ ಸೀಮಂತ ನಡೆಸಿಕೊಟ್ಟರು.
ಎಸ್.ಐ ಗಳಾದ ಸುನಿಲ್ , ಚಂದ್ರಶೇಖರ್ ಮತ್ತು ಸಿಬ್ಬಂದಿ ವರ್ಗ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.