ADVERTISEMENT

ಶ್ರೀರಂಗಪಟ್ಟಣದ ಮೇಲೆ ಕಾಳಿ ಸ್ವಾಮೀಜಿ ಕಣ್ಣೇಕೆ?

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 12:01 IST
Last Updated 23 ಫೆಬ್ರುವರಿ 2022, 12:01 IST

ಶ್ರೀರಂಗಪಟ್ಟಣ ವಿಶ್ವಪ್ರಸಿದ್ಧ ಪಾರಂಪರಿಕ ತಾಣ. ಗತವೈಭವ ಸಾರುವ ಸ್ಮಾರಕಗಳ ತವರೂರು. ಕಾಳಿಮಠದ ಋಷಿಕುಮಾರ ಸ್ವಾಮೀಜಿ, ಇಲ್ಲಿ ಹಿಂದೂ–ಮುಸ್ಲಿಮರ ನಡುವೆ ವೈಷಮ್ಯ ಮೂಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ.

ಹಿಂದೂ ಯುವಕ ಹರ್ಷ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿ ವಿಸರ್ಜಿಸುವ ಹೇಳಿಕೆ ನೀಡಿರುವ ಅವರು, ಈ ಹಿಂದೆಯೂ ಅಲ್ಲಿನ ಮಸೀದಿಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಶ್ರೀರಂಗಪಟ್ಟಣದಲ್ಲಿ ಸಹೋದರರಂತಿರುವ ಹಿಂದೂ–ಮುಸ್ಲಿಮರ ನಡುವೆ ವೈಷಮ್ಯ ಮೂಡಿಸುವ ಕೆಲಸವನ್ನು ಹೊರಗಿನ ಶಕ್ತಿಗಳು ಮಾಡುತ್ತಿವೆ ಎಂಬ ಆರೋಪ ಸ್ಥಳೀಯರದ್ದು.

ADVERTISEMENT

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.