ADVERTISEMENT

ಆದಿಚುಂಚನಗಿರಿ: ರಾಜ್ಯಮಟ್ಟದ ಜನಪದ ಕಲಾಮೇಳ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 21:09 IST
Last Updated 22 ಸೆಪ್ಟೆಂಬರ್ 2024, 21:09 IST
ಪ್ರಸನ್ನನಾಥ ಸ್ವಾಮೀಜಿ
ಪ್ರಸನ್ನನಾಥ ಸ್ವಾಮೀಜಿ   

ನಾಗಮಂಗಲ (ಮಂಡ್ಯ ಜಿಲ್ಲೆ): ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿಯವರ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಸೆ.23ರಿಂದ 25ರವರೆಗೆ ರಾಜ್ಯ ಮಟ್ಟದ 45ನೇ ಕಾಲಭೈರವೇಶ್ವರ ಜನಪದ ಕಲಾಮೇಳ ಆಯೋಜಿಸಲಾಗಿದೆ.

ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಕಲಾಮೇಳ ಸೆ.23ರ ಸಂಜೆ 5ಕ್ಕೆ ಉದ್ಘಾಟನೆಗೊಳ್ಳಲಿದೆ. ಸೆ. 24ರಂದು ಬೆಳಿಗ್ಗೆ 10.30ಕ್ಕೆ ವಿವಿಧ ಕ್ಷೇತ್ರದ ಸಾಧಕರಿಗೆ ‘ಚುಂಚಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ 7ಕ್ಕೆ ಕ್ಷೇತ್ರದ ಜೋಡಿ ರಸ್ತೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಬಳಿಕ ಕಾಲಭೈರವೇಶ್ವರಸ್ವಾಮಿ ಪುಷ್ಕರಣಿಯಲ್ಲಿ ತೆಪ್ಪೋತ್ಸವ ಜರುಗಲಿದೆ.

25ರಂದು ಬೆಳಿಗ್ಗೆ 9.30ಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ವಾರ್ಷಿಕ ಪಟ್ಟಾಭಿಷೇಕ, ಗುರು ಸಂಸ್ಮರಣೋತ್ಸವ ಮತ್ತು ಕಲಾಮೇಳದ ಸಮಾರೋಪ ಸಮಾರಂಭ ಜರುಗಲಿದೆ. ಜನಪದ ಕಲಾಮೇಳದಲ್ಲಿ ಭಾಗವಹಿಸುವ ಕಲಾವಿದರಿಗೆ ಪ್ರಯಾಣ ಭತ್ಯೆ, ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.

ADVERTISEMENT
ಆದಿಚುಂಚನಗಿರಿ ಕ್ಷೇತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.