ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿಗೆ ಹಂಸಲೇಖ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2024, 9:12 IST
Last Updated 25 ಜೂನ್ 2024, 9:12 IST
<div class="paragraphs"><p>ಹಂಸಲೇಖ</p></div>

ಹಂಸಲೇಖ

   

ಮಂಡ್ಯ: ನಗರದ ಕರ್ನಾಟಕ ಸಂಘದಿಂದ ಸ್ಥಾಪಿಸಿರುವ ‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ’ಯನ್ನು ಪ್ರಥಮ ಬಾರಿಗೆ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನೀಡುತ್ತಿದ್ದೇವೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು. 

ನಗರದ ರೈತ ಸಭಾಂಗಣದಲ್ಲಿ ಜೂನ್‌ 30ರಂದು ಮಧ್ಯಾಹ್ನ 3ಕ್ಕೆ ಏರ್ಪಡಿಸಿರುವ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 

ADVERTISEMENT

ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದು, ಮಂಡ್ಯ ಶಾಸಕ ರವಿಕುಮಾರಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ಕೇಂದ್ರವಲಯದ ಐಜಿಪಿ ಬಿ.ಆರ್‌.ರವಿಕಾಂತೇಗೌಡ ನಾಲ್ವಡಿ ಕುರಿತು ಮಾತನಾಡಲಿದ್ದಾರೆ. ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ನಾಲ್ವಡಿ ಅವರ ಭಾವಚಿತ್ರ ಅನಾವರಣ ಮಾಡಲಿದ್ದು, ವಿಧಾನ ಪರಿಷತ್‌ ಸದಸ್ಯರು, ಮಾಜಿ ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.