ಮಂಡ್ಯ: ನಗರದ ಎಸ್.ಡಿ.ಜಯರಾಮ್ ಆಸ್ಪತ್ರೆ, ಸ್ಮೈಲ್ಸ್ ಗ್ಯಾಸ್ಟ್ರೋ ಎಂಟೆರಾಲಜಿ, ಎಸ್.ಡಿ.ಜಯರಾಮ್ ಸ್ಕೂಲ್ ಆಫ್ ನರ್ಸಿಂಗ್ ಪ್ಯಾರಾಮೆಡಿಕಲ್ ಸೈನ್ಸಸ್ ವಿದ್ಯಾರ್ಥಿಗಳಿಂದ ಮೂಲವ್ಯಾಧಿ(ಫೈಲ್ಸ್) ಸಮಸ್ಯೆ ಸಂಬಂಧ ಬೃಹತ್ ವಾಕಥಾನ್ ಕಾರ್ಯಕ್ರಮವು ನ.20 ಬೆಳಿಗ್ಗೆ 10.30ಕ್ಕೆ ನಗರದಲ್ಲಿ ನಡೆಯಲಿದೆ ಎಂದು ಎಸ್.ಡಿ.ಜಯರಾಮ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಾದೇಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಚಾಲನೆ ನೀಡಲಿದ್ದು, ಮೂಲವ್ಯಾಧಿ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವರೆಗೆ ಬೃಹತ್ ವಾಕಥಾನ್ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
‘ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಅವರು ಚಾಲನೆ ನೀಡುವರು. ಈ ಮೂಲಕ ಮೂಲವ್ಯಾಧಿ ಖಾಯಿಲೆಗಳಿಗೆ ಸಂಬಂಧಿಸಿದ ಹಾಗೂ ಶೌಚಾಲಯಗಳನ್ನು ಉಪಯೋಗಿಸುವ ಕುರಿತು ಜನಾಂದೋಲನ ರೂಪಿಸುವ ಉದ್ದೇಶವಿದೆ’ ಎಂದರು.
ಕಾರ್ಯಕ್ರಮದಲ್ಲಿ ನಗರದ ವಿವಿಧ ನರ್ಸಿಂಗ್ ಕಾಲೇಜುಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಮೂಲವ್ಯಾದಿ ಕುರಿತ ಘೋಷವಾಕ್ಯಗಳ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಯ ಸತ್ಯನಾರಾಯಣ್, ಅಕ್ಷಯ್, ಗಿರೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.