ಮೈಸೂರು: ದಸರಾದ ಅಂಗವಾಗಿ ದೀಪಾಲಂಕಾರ ಉಪಸಮಿತಿಗೆ ಆಯ್ಕೆ ಮಾಡಿದ ಸದಸ್ಯರಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಔತಣಕೂಟ ಏರ್ಪಡಿಸಿ, ಭರ್ಜರಿ ಉಡುಗೊರೆ ನೀಡಲಾಗಿದೆ.
ಈ ಬಾರಿ ಹಿಂದೆಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ದಸರಾ ಉಪಸಮಿತಿಗಳಿಗೆ ಸದಸ್ಯರನ್ನು ನೇಮಕ ಮಾಡಿದ್ದು, ಅವರು ದಸರಾ ಸಮಯದಲ್ಲಿ ಪಾಸ್ ಹಾಗೂ ಇನ್ನಿತರ ಸೌಲಭ್ಯಕ್ಕಾಗಿ ಬೇಡಿಕೆ ಇಟ್ಟಿದ್ದರು. ಅವುಗಳಲ್ಲಿ ಹಲವು ವಿಚಾರಗಳನ್ನು ಪೂರೈಸಲು ಅಧಿಕಾರಿಗಳಿಗೆ ಅಸಾಧ್ಯವಾದಾಗ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ದೀಪಾಲಂಕಾರ ಉಪಸಮಿತಿಯ ಸದಸ್ಯರನ್ನು ಸನ್ಮಾನಿಸಿ ಅವರಿಗೆ ಬೆಲೆಬಾಳುವ ಬ್ರಾಂಡೆಡ್ ವಾಚ್‌ಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರ್ಯಕ್ರಮವನ್ನು ಸೆಸ್ಕ್ ಮೂಲಕ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ. ಕಾರ್ಯಕ್ರಮದ ಬಗ್ಗೆ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕಾರ್ಯಕ್ರಮದಲ್ಲಿ ದೀಪಾಲಂಕಾರ ಉಪ ಸಮಿತಿ ಅಧ್ಯಕ್ಷ ಸೈಯದ್ ಇಕ್ಬಾಲ್, ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕ ಮುನಿಗೋಪಾಲ್ ರಾಜು ಹಾಗೂ ಇತರೆ ಅಧಿಕಾರಿಗಳೂ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.