ADVERTISEMENT

ಅಂಗನವಾಡಿ ಕೇಂದ್ರ ದುರಸ್ತಿಗೆ ಕ್ರಮ: ಜಿ.ಟಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 7:36 IST
Last Updated 22 ಜೂನ್ 2024, 7:36 IST
ಮೈಸೂರಿನ ವಿಜಯನಗರದ ವಿಭಾಗೀಯ ಸ್ತ್ರೀಶಕ್ತಿ ಭವನದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ರಾಷ್ಟ್ರೀಯ ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಿಸಿದರು
ಮೈಸೂರಿನ ವಿಜಯನಗರದ ವಿಭಾಗೀಯ ಸ್ತ್ರೀಶಕ್ತಿ ಭವನದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರು ರಾಷ್ಟ್ರೀಯ ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ವಿತರಿಸಿದರು   

ಮೈಸೂರು: ‘ಅಂಗನವಾಡಿ ಕೇಂದ್ರಗಳನ್ನು ದುರಸ್ತಿಪಡಿಸಲು ಹಾಗೂ ಸೌಕರ್ಯಗಳ ಕೊರತೆ ಇದ್ದರೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಿಂದ ಇಲ್ಲಿನ ವಿಜಯನಗರದ ವಿಭಾಗೀಯ ಸ್ತ್ರೀಶಕ್ತಿ ಭವನದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾದ ಸ್ಮಾರ್ಟ್‌ ಫೋನ್ ವಿತರಿಸಿ ಅವರು ಮಾತನಾಡಿದರು.

‘ಸ್ಮಾರ್ಟ್‌ಫೋನ್ ನೀಡಿರುವುದರಿಂದ ಸಾಕಷ್ಟು ಮಾಹಿತಿ ದೊರೆಯುತ್ತದೆ. ಇಲಾಖೆಯ ಕೆಲಸಗಳು ಸುಗಮವಾಗಿ ಮಾಡಲು ಮತ್ತು ಮಕ್ಕಳಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಗಿದೆ’ ಎಂದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಬ್ಬಯ್ಯ, ತಾ.ಪಂ. ಇಒ ಗಿರಿಧರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.