ADVERTISEMENT

ಶಂಕರಾಚಾರ್ಯರ ಸಿದ್ಧಾಂತ ಸಮಾಜಕ್ಕೆ ಮಾದರಿ: ಶಾಸಕ ಟಿ.ಎಸ್. ಶ್ರೀವತ್ಸ

​ಪ್ರಜಾವಾಣಿ ವಾರ್ತೆ
Published 12 ಮೇ 2024, 12:25 IST
Last Updated 12 ಮೇ 2024, 12:25 IST
<div class="paragraphs"><p>ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಭಾನುವಾರ ಆಚರಿಸಲಾಯಿತು</p></div>

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಭಾನುವಾರ ಆಚರಿಸಲಾಯಿತು

   

ಮೈಸೂರು: ‘ಶಂಕರಾಚಾರ್ಯರ ಸಿದ್ಧಾಂತ ಸಮಾಜಕ್ಕೆ ಮಾದರಿಯಾಗಿದೆ’ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಭಾನುವಾರ ಆಯೋಜಿಸಿದ್ದ ‘ತತ್ವಜ್ಞಾನಿ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

‘ಶಂಕರಾಚಾರ್ಯರು ಹಿಂದೂ ಧರ್ಮದ ಉಳಿವಿಗಾಗಿ ಭಾರತವನ್ನು ಕಾಲ್ನಡಿಗೆಯಲ್ಲಿ ಪರ್ಯಟನೆ ಮಾಡಿ ನಾಲ್ಕು ಪೀಠಗಳನ್ನು ಸ್ಥಾಪಿಸಿದ್ದಾರೆ. ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದ ಅವರು ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದವರು. ರಾಮಾನುಜರು ಹಾಗೂ ಶಂಕರಾಚಾರ್ಯರ ಧ್ಯೇಯ–ಸಿದ್ಧಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿವೆ. ಸಾಂಸ್ಕೃತಿಕ ಹಾಗೂ ವೈಜ್ಞಾನಿಕವಾಗಿಯೂ ಅವರು ಕೊಡುಗೆ ನೀಡಿದ್ದಾರೆ’ ಎಂದರು.

ಪಕ್ಷದ ನಗರ ಘಟಕದ ಅಧ್ಯಕ್ಷ ಎಲ್. ನಾಗೇಂದ್ರ, ‘ಶಂಕರಾಚಾರ್ಯರ ತತ್ವಗಳು‌ ಯುವ ಮನಸ್ಸುಗಳನ್ನು ಸನ್ಮಾರ್ಗದತ್ತ ಕರೆದೊಯ್ಯುತ್ತದೆ’ ಎಂದರು.

ಬಿಜೆಪಿ ರಾಜ್ಯ ಘಟಕದ ‍ಪ್ರಕೋಷ್ಟಗಳ ರಾಜ್ಯ ಸಹ ಸಂಯೋಜಕ ಎನ್.ವಿ. ಫಣೀಶ್, ಮಾಜಿ ಮೇಯರ್‌ ಶಿವಕುಮಾರ್, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಎಚ್‌.ಜಿ. ಗಿರಿಧರ್, ಕೇಬಲ್ ಮಹೇಶ್, ಗೋಪಾಲ್ ರಾವ್,

ಉಪಾಧ್ಯಕ್ಷ ಜೋಗಿ ಮಂಜು, ಎಸ್ಸಿ ಮೋರ್ಚಾ ಅಧ್ಯಕ್ಷ ಶೈಲೇಂದ್ರ, ನಗರಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್, ಬಿ.ವಿ.ಮಂಜುನಾಥ್, ಮುಖಂಡರಾದ ರಾಕೇಶ್ ಭಟ್, ಟಿ. ರವಿ, ರಾಕೇಶ್ ಗೌಡ, ಅಜಯ್ ಶಾಸ್ತ್ರಿ, ಕೆ.ಎಂ. ನಿಶಾಂತ್, ನವೀನ್ ಕುಮಾರ್, ಜಗದೀಶ್, ಎಂ.ಆರ್. ಬಾಲಕೃಷ್ಣ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.