ಮೈಸೂರು: ವೈಜ್ಞಾನಿಕ ಮತ್ತು ಧರ್ಮನಿರಪೇಕ್ಷ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಠ್ಯಕ್ರಮ ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಷ್ ಮಾತನಾಡಿ, ‘ಹೊಸ ಶಿಕ್ಷಣ ನೀತಿಯ ದಿಢೀರ್ ಹೇರಿಕೆಯಿಂದ ವಿದ್ಯಾರ್ಥಿಗಳಲ್ಲಿ ಉಂಟಾದ ಗೊಂದಲವನ್ನು ನಿವಾರಿಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು. ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತರಿಪಡಿಸಬೇಕು. ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಪುಷ್ಪಾ, ನಿತಿನ್, ಸ್ವಾತಿ, ಚೈತ್ರಾ, ಹೇಮಾ ಚಂದ್ರಿಕಾ, ಚಂದನಾ, ಅಂಜಲಿ, ದಿಶಾ ಹಾಗೂ ಜಟ್ಟಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.