ಮೈಸೂರು: ಬೆಂಗಳೂರಿನಲ್ಲಿ ಈಚೆಗೆ ಕ್ರೀಡಾ ಇಲಾಖೆ ಹಾಗೂ ರಾಜ್ಯ ಒಲಿಂಪಿಕ್ಸ್ ಸಂಸ್ಥೆ ಸಹಯೋಗದಲ್ಲಿ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಗರದ ಐಡಿಯಲ್ ಜಾವಾ ರೋಟರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಎಂ.ಎಲ್. ಅಜಯ್ ಪೃಥ್ವಿರಾಜ್ ಎರಡು ಬಹುಮಾನ ಪಡೆದಿದ್ದಾರೆ.
ಬಾಲಕರ 400 ಹಾಗೂ 600 ಮೀಟರ್ಸ್ ಓಟದಲ್ಲಿ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಗಾಯತ್ರಿಪುರಂ ನಿವಾಸಿ ಎಂ.ಲಿಂಗರಾಜು ಮತ್ತು ಸಂಗೀತಾ ದಂಪತಿ ಪುತ್ರನಾದ ಅಜಯ್ ಅಂತರರಾಷ್ಟ್ರೀಯ ಅಥ್ಲೀಟ್ ರೀನಾ ಜಾರ್ಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.