ADVERTISEMENT

1 ಲಕ್ಷ ಡೋಸ್ ಕೋವಿಡ್‌ ಲಸಿಕೆ ವಿತರಿಸಿದ ಮೈಸೂರಿನ ಅಪೋಲೊ ಬಿಜಿಎಸ್‌ ಆಸ್ಪತ್ರೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 1:55 IST
Last Updated 9 ಜುಲೈ 2021, 1:55 IST
ಒಂದು ಲಕ್ಷ ಕೋವಿಡ್ ಲಸಿಕೆ ವಿತರಣೆಗೆ ಕಾರಣರಾದ ಅಪೋಲೊ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ
ಒಂದು ಲಕ್ಷ ಕೋವಿಡ್ ಲಸಿಕೆ ವಿತರಣೆಗೆ ಕಾರಣರಾದ ಅಪೋಲೊ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ   

ಮೈಸೂರು: ನಗರದ ಅಪೋಲೊ ಬಿಜಿಎಸ್‌ ಆಸ್ಪತ್ರೆಯು 1 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ನೀಡುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ.

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾರ್ಚ್‌ 1 ರಂದು ಲಸಿಕೆ ನೀಡುವ ಮೂಲಕ ಲಸಿಕೆ ವಿತರಣೆಗೆ ಚಾಲನೆ ಲಭಿಸಿತ್ತು. ಮೇ 11 ರಿಂದ ಸರ್ಕಾರದ ಹೊಸ ಮಾರ್ಗಸೂಚಿಯಂತೆ 18 ವರ್ಷಕ್ಕಿಂತ ಮೇಲಿನವರಿಗೆ ಲಸಿಕೆ ಪ್ರಕ್ರಿಯೆ ಆರಂಭಿಸಲಾಯಿತು.

ಕೋವಿಡ್‌ ಮಾರ್ಗಸೂಚಿಯಂತೆ ಅಂತರ ಕಾಯ್ದುಕೊಂಡು ಗರಿಷ್ಠ ಮಂದಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಆಸ್ಪತ್ರೆಯ ಸಮೀಪದಲ್ಲಿರುವ ಗಾನಭಾರತಿಯಲ್ಲಿ ಕೋವಿಡ್‌ ಲಸಿಕೆ ವಿಸ್ತೃತ ಕೇಂದ್ರವನ್ನು ಆರಂಭಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿತ್ತು.

ADVERTISEMENT

ಆಸ್ಪತ್ರೆಯ ಉಪಾಧ್ಯಕ್ಷ ಎನ್.ಜಿ.ಭರತೀಶ ರೆಡ್ಡಿ ಮಾತನಾಡಿ, ‘1 ಲಕ್ಷ ಡೋಸ್‌ಗಳ ಮೈಲಿಗಲ್ಲು ಸಾಧಿಸಿದ್ದಕ್ಕೆ ಸಂತಸವಾಗಿದೆ. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡಿರುವುದು ಮತ್ತು ಸರಿಯಾದ ಸಮಯಕ್ಕೆ ಲಸಿಕೆ ಲಭಿಸಿದ್ದರಿಂದ ಇದು ಸಾಧ್ಯವಾಯಿತು’ ಎಂದು ಹೇಳಿದರು.

‘ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಜತೆಗೆ ಈ ಅಭಿಯಾನವನ್ನು ಇತರ ಕಡೆಗಳಿಗೂ ವಿಸ್ತರಿಸಿದೆವು. ಬೈಲುಕುಪ್ಪೆಯಲ್ಲಿರುವ ಟಿಬೆಟನ್ ಶಿಬಿರದಲ್ಲಿ ನೆಲೆಸಿರುವ 6 ಸಾವಿರಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಿದ್ದೇವೆ. ಮೈಸೂರಿನ ಎಲ್ಲಾ ಕಾರ್ಪೊರೇಟ್ ಕಂಪನಿಗಳ ಸಿಬ್ಬಂದಿಗೂ ಲಸಿಕೆ ಹಾಕಿದ್ದೇವೆ’ ಎಂದರು.

‘ಲಸಿಕೆ ಬಗ್ಗೆ ಜಾಗೃತಿ ಮೂಡಿಸಿ, ಹೆಚ್ಚಿನ ಪ್ರಚಾರ ಮಾಡುವ ಉದ್ದೇಶ ದಿಂದ ಅಪೋಲೊ ಸಮೂಹವು ಜೂನ್ 30 ರಂದು ಇಡೀ ದಿನ ‘ಮೆಗಾ ವ್ಯಾಕ್ಸಿ ನೇಷನ್ ದಿನ’ ಆಯೋಜಿಸಿತ್ತು. ಗರಿಷ್ಠ ಜನ ರಿಗೆ ಕೋವಿಡ್‌ ಲಸಿಕೆ ಹಾಕಿದ ದೇಶದ ಕೆಲವೇ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನಮ್ಮದೂ ಒಂದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.