ADVERTISEMENT

35 ಪಾಸಿಟಿವ್ ಪ್ರಕರಣ; ಅರಿಯೂರು ಸೀಲ್‌ಡೌನ್

ನಂಜನಗೂಡು ತಾಲ್ಲೂಕಿನ ಹಾಡ್ಯ ಪಂಚಾಯಿತಿ ವ್ಯಾಪ್ತಿಯ ಗ್ರಾಮ: ತಾಲ್ಲೂಕು ಆಡಳಿತದಿಂದ ಕ್ರಮ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 5:03 IST
Last Updated 20 ಜೂನ್ 2021, 5:03 IST
ನಂಜನಗೂಡು ತಾಲ್ಲೂಕಿನ ಅರಿಯೂರು ಗ್ರಾಮದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿದ್ದರಿಂದ ಶನಿವಾರ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ (ಎಡಚಿತ್ರ). ಶಾಸಕ ಬಿ.ಹರ್ಷವರ್ಧನ್ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ನಂಜನಗೂಡು ತಾಲ್ಲೂಕಿನ ಅರಿಯೂರು ಗ್ರಾಮದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿದ್ದರಿಂದ ಶನಿವಾರ ಗ್ರಾಮವನ್ನು ಸೀಲ್‌ಡೌನ್ ಮಾಡಲಾಗಿದೆ (ಎಡಚಿತ್ರ). ಶಾಸಕ ಬಿ.ಹರ್ಷವರ್ಧನ್ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ನಂಜನಗೂಡು: ತಾಲ್ಲೂಕಿನ ಹಾಡ್ಯ ಗ್ರಾ.ಪಂ.ವ್ಯಾಪ್ತಿಯ ಅರಿಯೂರು ಗ್ರಾಮದಲ್ಲಿ ಎರಡು ದಿನಗಳ ಅವಧಿಯಲ್ಲಿ 35 ಮಂದಿಯಲ್ಲಿ ಕೊರೊನಾ ಪತ್ತೆಯಾ ಗಿರುವುದರಿಂದ ತಾಲ್ಲೂಕು ಆಡಳಿತ ಗ್ರಾಮವನ್ನು ಸೀಲ್‌ಡೌನ್ ಮಾಡಿದೆ.

300 ಜನ ಇರುವ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದೆ. 10 ದಿನ ಗ್ರಾಮದಿಂದ ಯಾರೂ ಹೊರಗೆ ಹೋಗದಂತೆ ಹಾಗೂ ಗ್ರಾಮಕ್ಕೆ ಯಾರೂ ಬಾರದಂತೆ ನಿರ್ಬಂಧ ವಿಧಿಸಲಾಗಿದೆ.

ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ ದಲ್ಲಿ ತಪಾಸಣೆ ನಡೆಸಿದಾಗ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಎರಡು ದಿನಗಳ ಅಂತರದಲ್ಲಿ 24 ಮಂದಿಗೆ ಸೋಂಕು ತಗುಲಿರುವುದು ಮೊದಲಿಗೆ ಪತ್ತೆಯಾಗಿತ್ತು. ಗ್ರಾಮದ ಜನ ಹೆಚ್ಚಾಗಿ ಬೆಂಗಳೂರು ಹಾಗೂ ರಾಮನಗರಗಳಲ್ಲಿ ಕೂಲಿ ಕೆಲಸ ಮಾಡುವವರಾಗಿದ್ದು, ಕೂಲಿಗೆ ತೆರಳಿದ್ದ ವೇಳೆ ಸೋಂಕು ತಗುಲಿದೆ ಎನ್ನಲಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಿವಾಸ್ ಸೂಚನೆ ಮೇರೆಗೆ ಹಾಡ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕರಿಯಯ್ಯ ಮತ್ತು ಸಿಬ್ಬಂದಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗ್ರಾಮದಲ್ಲಿದ್ದಾರೆ.

ಶಾಸಕ ಬಿ.ಹರ್ಷವರ್ಧನ್ ಭೇಟಿ: ಶಾಸಕ ಬಿ.ಹರ್ಷವರ್ಧನ್ ಗ್ರಾಮಕ್ಕೆ ಭೇಟಿ ನೀಡಿ, ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ ನಡೆಸಿದರು. ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಿದರು. ತಾಲ್ಲೂಕಿನಲ್ಲಿ 4 ಕಡೆ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಂಬುಲೆನ್ಸ್, ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.