ಬೆಟ್ಟದಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ಅರಣ್ಯಕ್ಕೆ ಭಾನುವಾರ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಮರಗಳು ಸುಟ್ಟು ಹೋಗಿವೆ.
‘ಬೆಟ್ಟಕ್ಕೆ ಪದೇಪದೇ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಿಕೊಳ್ಳುವ ಅವಶ್ಯಕತೆ ಇದೆ. ಇದಲ್ಲದೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬೆಟ್ಟಕ್ಕೆ ಬರುತ್ತಿದ್ದು, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಲ್ಲಂದರಲ್ಲಿ ಹಾಕಿ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಇದಕ್ಕೆ ಸೂಕ್ತ ಕ್ರಮ ವಹಿಸಿ ಬೆಟ್ಟದಲ್ಲಿರುವ ಅರಣ್ಯ ಪ್ರದೇಶವನ್ನು ಕಾಪಾಡಬೇಕು’ ಎಂದು ಗ್ರಾಮದ ಮುಖಂಡ ಕೃಷ್ಣೆಗೌಡ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.